ಚಿತ್ರದುರ್ಗ:
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿ.ಪಂ., ನಗರಸಭೆ ಸಂಯುಕ್ತಾಶ್ರಯದಲ್ಲಿ ಒನಕೆ ಓಬವ್ವ ವೃತ್ತದಲ್ಲಿ ನಗರಸಭೆಯಿಂದ ಶುಕ್ರವಾರ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಏಪ್ರಿಲ್ 18 ರಂದು ನಡೆಯುವ ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಸಭೆಯಿಂದ ಏರ್ಪಡಿಸಲಾಗಿದ್ದ ಜಾಥ ಹಾಗೂ ಬೈಕ್ ರ್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ವಿನೋತ್‍ಪ್ರಿಯಾ ಪುರಷರಿರಲಿ, ಮಹಿಳೆಯರಿರಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲಿ ಎನ್ನುವ ಅರಿವು ಜನಸಾಮಾನ್ಯರಲ್ಲಿ ಮೂಡಿಸುವುದಕ್ಕಾಗಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ, ಉಪವಿಭಾಗಾಧಿಕಾರಿ ವಿಜಯಕುಮಾರ್, ನಗರಸಭೆ ಪೌರಾಯುಕ್ತರಾದ ಚಂದ್ರಪ್ಪ, ಪರಿಸರ ಇಂಜಿನಿಯರ್ ಜಾಫರ್, ಕಂದಾಯಾಧಿಕಾರಿ ವಾಸೀಂ, ಹೆಲ್ತ್ ಇನ್ಸ್‍ಪೆಕ್ಟರ್‍ಗಳಾದ ಸರಳ, ಭಾರತಿ, ಮಂಜುನಾಥ್, ಅಶೋಕ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.ಜಾಥ ಹಾಗೂ ಬೈಕ್‍ರ್ಯಾಲಿಯಲ್ಲಿ ಭಾಗವಹಿಸಿದ್ದ ನಗರಸಭೆ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತದಾನದ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ