ಚಳ್ಳಕೆರೆ
ನಗರದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಆವರಣದಲ್ಲಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಾಗಿಮಿಸಿದ್ದ ರೈತ ಸಮುದಾಯಕ್ಕೆ ಪರಿಹಾರ ಒದಗಿಸುವ ಭರವಸೆ ನೀಡಿದ ಅಧಿಕಾರಿ ವರ್ಗ ರೈತರ ಮನಲವಲಿಸಿ ಮತದಾನ ಬಹಿಷ್ಕಾರದ ವಿಚಾರವನ್ನು ಕೈಬಿಡುವಂತೆ ತಿಳಿಸಿದ್ದಲ್ಲದೆ ಎಲ್ಲಾ ರೈತರಿಗೂ ಮತದಾನದ ಪ್ರತಿಜ್ಞಾ ವಿಧಿ ಬೋದಿಸಲಾಯಿತು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರೈತರೊಂದಿಗೆ ತಹಶೀಲ್ದಾರ್, ಸ್ವೀಫ್ ಸಮಿತಿ ಅಧ್ಯಕ್ಷ ಹಾಗೂ ಅಧಿಕಾರಿಗಳ ತಂಡ ಮತದಾನದ ಮೌಲ್ಯಗಳ ಬಗ್ಗೆ ತಿಳಿಸಿ ಮಾತನಾಡಿದರು. ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ಮಾತನಾಡಿ, ರೈತ ಸಮುದಾಯ ನಿರಂತರವಾಗಿ ಎದುರಿಸುವ ಎಲ್ಲಾ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ಅಧಿಕಾರಿ ವರ್ಗಕ್ಕೆ ಇದೆ. ಆದರೆ, ಕೆಲವೊಂದು ಪರಿಹಾರವನ್ನು ತಾಲ್ಲೂಕು ಆಡಳಿತವೇ ರೂಪಿಸಲು ಅವಕಾಶವಿರುತ್ತದೆ. ಕಾನೂನು ವ್ಯಾಪ್ತಿ ಮೀರಿ ಯಾವುದೇ ಭರವಸೆ ಕೊಡಲು ಈ ಸಂದರ್ಭದಲ್ಲಿ ಸಾಧ್ಯವಿಲ್ಲ. ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಎಲ್ಲಾ ರೈತರು ಪಾಲ್ಗೊಂಡು ಶೇ.100ರ ಮತನದಾನ ಗುರಿ ಮುಟ್ಟಲು ಸಹಕರಿಸುವಂತೆ ಮನವಿ ಮಾಡಿದರು.
ಎಲ್ಲಾ ರೈತರು ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಕುರಿತು ಸಕರಾತ್ಮಕವಾಗಿ ಸ್ಪಂದಿಸಿದರಲ್ಲದೆ, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಪ್ರತಿಜ್ಞಾ ವಿಧಿಯನ್ನು ಸಹ ಸ್ವೀಕರಿಸಿದರು. ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ, ಕಾರ್ಯನಿರ್ವಹಣಾ ಧಿಕಾರಿ ಬಿ.ಎಲ್.ಈಶ್ವರಪ್ರಸಾದ್, ತಹಶೀಲ್ದಾರ್ ತುಷಾರ್ ಬಿ.ಹೊಸೂರ್, ವೃತ್ತ ನಿರೀಕ್ಷ ಎನ್.ತಿಮ್ಮಣ್ಣ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.