ಮತದಾರ ಜಾಗೃತಿ ಅಭಿಯಾನ

ಚಳ್ಳಕೆರೆ

         ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರರನ್ನು ತನ್ನ ಮತವನ್ನು ಚಲಾಯಿಸುವ ನಿಟ್ಟಿನಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಜಾಗೃತೆ ವಹಿಸಬೇಕು. ಪ್ರತಿಯೊಬ್ಬ ಮತದಾರರನ್ನು ಮತದಾರರ ಪಟ್ಟಿಯಲ್ಲಿರುವ ದಾಖಲಾತಿಗಳನ್ನು ಪರಿಶೀಲಿಸಬೇಕು.

           ವಿಶೇಷವಾಗಿ ಯುವ ಮತ್ತು ಮಹಿಳಾ ಮತದಾರರು ತಪ್ಪದೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಜಾಗೃತೆ ವಹಿಸಬೇಕೆನ್ನುವ ನಿಟ್ಟಿನಲ್ಲಿ ಫೆ.23, 24 ಮತ್ತು ಮಾರ್ಚ್ 2, 3 ರಂದು ಎಲ್ಲಾ ಮತಗಟ್ಟೆ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರೀಕ್ಷಣೆ ನೊಂದಣೆ ಹಾಗೂ ತಿದ್ದುಪಡಿಗೆ ಅವಕಾಶಕಲ್ಪಿಸಿದ್ದು, ಮತದಾರರು ಹಾಗೂ ರಾಜಕೀಯ ಪಕ್ಷಗಳ ನೇತಾರರು ಈ ಬಗ್ಗೆ ಜಾಗೃತೆ ವಹಿಸುವಂತೆ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಸೂಚಿಸಿದರು.

          ಅವರು, ಗುರುವಾರ ಮಧ್ಯಾಹ್ನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮಾನ್ಯ ಜಿಲ್ಲಾಧಿಕಾರಿಗಳು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ನೀಡಲಾದ ಮಾಹಿತಿಗಳನ್ನು ಸಭೆಗೆ ನೀಡಿದರು. ಸಭೆಯಲ್ಲಿ ನಗರದ ವಿವಿಧ ಮತಗಟ್ಟೆಗಳ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ರಾಜಕೀಯ ಪಕ್ಷದ ಮುಖಂಡರು ಭಾಗವಹಿಸಿದ್ದರು.

           ಲೋಕಸಭೆ ಚುನಾವಣೆ ಶೀಘ್ರದಲ್ಲೇ ನಡೆಯುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮೇಲ್ಕಂಡ ನಾಲ್ಕು ದಿನಗಳ ಕಾಲ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಈ ಬಾರಿ ವಿಶೇಷವಾಗಿ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ನಾಮಪತ್ರ ಸಲ್ಲಿಕೆಯ ಅಂತಿಮ ದಿನದವರೆಗೂ ಮತದಾರರ ಪಟ್ಟಿ ಸೇರ್ಪಡೆಗೆ ಅವಕಾಶ ನೀಡಿದೆ.

         ಇದೊಂದು ಅಪರೂಪದ ಅವಕಾಶ ಮತದಾರರಿಗೆ ನೀಡಿದ್ದು, ಯಾವುದೇ ಕಾರಣಕ್ಕೂ ಕ್ಷೇತ್ರದ ಯಾವುದೇ ಮತದಾರರು ಮತದಾರಪಟ್ಟಿಯಿಂದ ಹೊರಗುಳಿಯುವಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಮತಗಟ್ಟೆಗಳ ಅಧಿಕಾರಿಗಳು ಜಾಗೃತೆ ವಹಿಸುವಂತೆ ಮನವಿ ಮಾಡಿದರು. ವಿವಿಧ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಸಭೆಯ ಮೂಲಕ ನೀಡಲಾಗುತ್ತಿದ್ದು, ಮಾಹಿತಿ ಪಡೆದ ಎಲ್ಲಾ ರಾಜಕೀಯ ಪಕ್ಷಗಳ ದುರೀಣರು ಪಕ್ಷದ ಸಂಘಟಕರಿಗೆ ಈ ಬಗ್ಗೆ ಮಾಹಿತಿ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಣೆ ಹಾಗೂ ಇನ್ನಿತರ ಮಾಹಿತಿಗಳನ್ನು ಈ ಸಂದರ್ಭದಲ್ಲಿ ಪರಿಶೀಲನೆ ಮಾಡಿಕೊಳ್ಳುವಂತೆ ಸೂಚಿಸಿದರು.

           ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಾವುದೇ ಮತದಾರ ತನ್ನ ಮತದಾರರ ಪಟ್ಟಿಯ ಮಾಹಿತಿಯನ್ನು ಪಡೆಯಲು ರಾಷ್ಟ್ರೀಯ ಮಟ್ಟದಲ್ಲಿರುವ ಸಹಾಯವಾಣಿ ಸಂಖ್ಯೆ 1950 ಅಥವಾ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಾಯವಾಣಿ ಸಂಖ್ಯೆ 08195-250508 ಸಂಪರ್ಕಿಸಲು ಮನವಿ ಮಾಡಿದರು. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ 251 ಬೂತ್‍ಗಳಿದ್ದು, ಈಗ 259ಕ್ಕೆ ಏರಿಕೆ ಮಾಡಲಾಗಿದೆ.

            ನಗರದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ 18 ವರ್ಷ ತುಂಬಿದ ವಿದ್ಯಾರ್ಥಿಗಳು ಮತಪಟ್ಟಿಯಲ್ಲಿ ಸೇರ್ಪಡೆಗೆ ಮನವಿ ಮಾಡಲಾಗಿದ್ದು, 256 ಅರ್ಜಿಗಳನ್ನು ವಿತರಿಸಲಾಗಿದೆ. ಈ ಪೈಕಿ 136 ಅರ್ಜಿಗಳು ಬಂದಿವೆ. ನಗರ ಪ್ರದೇಶದಲ್ಲಿ 46 ಅರ್ಜಿಗಳು ಮತದಾರರ ಸೇರ್ಪಡೆಗೆ ಬಂದಿವೆ ಎಂದರು. ಸಭೆಯಲ್ಲಿ ಕಂದಾಯಾಧಿಕಾರಿಗಳಾದ ಶರಣಬಸಪ್ಪ, ಶಾಂತಪ್ಪ, ವಿ.ಈರಮ್ಮ, ಮಹಲಿಂಗಪ್ಪ, ವೀರಭದ್ರಪ್ಪ, ನೀಲಕಂಠಚಾರ್, ಚುನಾವಣಾ ಇಲಾಖೆಯ ಪ್ರಕಾಶ್, ಓಬಳೇಶ್, ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link