ಬೆಂಗಳೂರು
ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜೀರಿಯನ್ನೊಬ್ಬನನ್ನು ಬಂಧಿಸಿ 4.5 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.ಹೆಣ್ಣೂರಿನ ಬಾಬುಸಾಬ್ ಪಾಳ್ಯದ ಪೀಟರ್ ಒಬಿಡಿ (27) ಬಂಧಿತ ಆರೋಪಿಯಾಗಿದ್ದಾನೆ. ನೈಜೀರಿಯಾದ ಅನ್ಬೆರಾ ಮೂಲದ ಆರೋಪಿಯು ವಿದ್ಯಾರ್ಥಿ ವೀಸಾ ಮೇಲೆ ನಗರಕ್ಕೆ ಬಂದು ಬಾಬುಸಾಬ್ ಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದ.
ಬೇರೆಡೆಯಿಂದ ಎಂಡಿಎಂಎ ಮಾದಕ ವಸ್ತುವನ್ನು ತಂದು ಕಾಲೇಜು ವಿದ್ಯಾರ್ಥಿಗಳು, ಐಟಿಬಿಟಿ ಕಂಪನಿಗಳ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.ಆರೋಪಿಯು ವೀಸಾ ಅವಧಿ ಮುಗಿದಿದ್ದರೂ, ನಗರದಲ್ಲಿಯೇ ಉಳಿದುಕೊಂಡು, ಕೃತ್ಯದಲ್ಲಿ ತೊಡಗಿದ್ದು, ಅರ್ಕಾವತಿ ಲೇಔಟ್ನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರಿಕೆಟ್ ಬೆಟ್ಟಿಂಗ್
ಹೆಗ್ಗನಹಳ್ಳಿಯ ಕಪಿಲಾ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ, 1 ಲಕ್ಷ 89 ಸಾವಿರ ರೂ. ನಗದು, ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.ಕಪಿಲಾ ನಗರದ ವಿಶ್ವನಾಥ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಟಿ -20 ಕ್ರಿಕೆಟ್ ಪಂದ್ಯಕ್ಕೆ ಮೊಬೈಲ್ ಮೂಲಕ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದನು. ಈತನ ಜೊತೆಗೆ ಬೆಟ್ಟಿಂಗ್ನಲ್ಲಿ ಭಾಗಿಯಾಗಿದ್ದ ಬುಕ್ಕಿ ನಿತಿನ್ ಪರಾರಿಯಾಗಿದ್ದು, ಆತನಿಗಾಗಿ ತೀವ್ರಶೋಧ ನಡೆಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








