ಲಂಪಿಸ್ಕಿನ್’ ಹತೋಟಿಗೆ ಕ್ರಮ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು

    ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ‘ಲಂಪಿಸ್ಕಿನ್’ ಎಂಬ ರೋಗ ಕಾಣಿಸಿಕೊಂಡಿದ್ದು ನನ್ನ ಗಮನಕ್ಕೆ ಬಂದಿದೆ. ಪಶುವೈದ್ಯಾಧಿಕಾರಿಗಳು ರೋಗ ನಿಯಂತ್ರಣಕ್ಕೆ ಮುಂದಾಗಬೇಕು ಇಲ್ಲವೇ ಪರಿಣಾಮ ಎದುರಿಸಲು ಸಿದ್ದರಾಗಿ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಒಂದೆಡೆ ಕೋರೊನಾ ಸಂಕಷ್ಟ ಮತ್ತೊಂದೆಡೆ ನೆರೆಯಿಂದ ಆದಯವಿಲ್ಲದೆ ರೈತರು ಕಂಗೆಟ್ಟಿದ್ದಾರೆ ಈ ಸಮಯದಲ್ಲಿ ಪಶುಸಂಗೋಪನೆ ಒಂದೇ ರೈತರಿಗೆ ಜೀವನಾಧಾರವಾಗಿದೆ ಈಗ ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ‘ಲಂಪಿಸ್ಕಿನ್’ ಜಾನುವುವಾರುಗಳಿಗೆ ಕಾಯಿಲೆ ಕಂಡುಬಂದಿದ್ದು ದನ-ಕರುಗಳ ಮೈಮೇಲೆ ಗುಳ್ಳೆ ಬರುವುದು, ಜ್ವರ ಕಾಣಿಸಿಕೊಳ್ಳುವುದು, ಆಹಾರ ಸೇವನೆಯಲ್ಲಿ ಸಮಸ್ಯೆ ಕಂಡುಬರುತ್ತಿರುವುದರಿಂದ ಪಶುಪಾಲಕರು ಆಂತಂಕಕ್ಕಿಡಾಗಿರುವುದು ನನ್ನ ಗಮನಕ್ಕೂ ಬಂದಿದೆ.

    ಇಲಾಖೆಯ ಕಾರ್ಯದರ್ಶಿ, ಆಯುಕ್ತರು ಮತ್ತು ನಿರ್ದೇಶಕರಿಗೆ ಈ ರೋಗದ ಕುರಿತಾಗಿ ಹೆಚ್ಚು ಗಮನ ಹರಿಸಲು ತಿಳಿಸಿದ್ದೇನೆ. ರಾಜ್ಯದಲ್ಲಿನ ಪಶು ಸಂಪತ್ತಿಗೆ ಯಾವುದೇ ರೀತಿ ತೊಂದರೆ ಆಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಲಂಪಿಸ್ಕಿನ್ ಮಾತ್ರವಲ್ಲದೇ ಜಾನುವಾರುಗಳಿಗೆ ಎದುರಾಗುವ ಯಾವುದೇ ಕಾಯಿಲೆಗಳಿರಲಿ ಅವುಗಳ ನಿಯಂತ್ರಣಕ್ಕೆ ಇಲಾಖೆಯ ಅಧಿಕಾರಿಗಳು ಸದಾ ಸಜ್ಜಾಗಿರಬೇಕು ಎಂದು ಸಚಿವರು ತಿಳಿಸಿದ್ದಾರೆ.

    ಕಲ್ಯಾಣ ಕರ್ನಾಟಕ ಭಾಗ ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ರೋಗ ಕಂಡುಬರುವ ಆತಂಕವಿದ್ದು ಪಶುಸಂಗೋಪನೆ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗಳಿಗೆ ರೋಗ ಹೆಚ್ಚು ಕಂಡುಬರುತ್ತಿರುವ ಸ್ಥಳಗಳಿಗೆ ಭೇಟಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಅಲ್ಲದೇ ಹೆಚ್ಚು ಪ್ರಕರಣಗಳಿರುವ ಗ್ರಾಮಗಳಲ್ಲಿ ಪಶು ಆರೋಗ್ಯ ಶಿಬಿರ ನಡೆಸಿ ರೋಗವನ್ನು ಹತೋಟಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಜಾನುವಾರುಗಳ ಆರೋಗ್ಯದಲ್ಲಿ ಏನಾದರು ಏರುಪೇರು ಕಂಡುಬದಲ್ಲಿ ತಕ್ಷಣಕ್ಕೆ ಹತ್ತಿರದ ಪಶು ಆರೋಗ್ಯ ಕೇಂದ್ರದಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಪಶುಪಾಲಕರಿಗೆ ಸಚಿವರು ಸಲಹೆ ನೀಡಿದ್ದಾರೆ. ಜಾನುವಾರುಗಳಲ್ಲಿನ ಈ ರೋಗ ನೋಣ ಹಾಗೂ ಸೊಳ್ಳೆಗಳಿಂದ ಹರಡುವುದರಿಂದ ಜಾನುವಾರು ಸಾಕಣೆದಾರರು ಸ್ವಚ್ಛತೆಯನ್ನು ಹೆಚ್ಚು ಕಾಪಾಡಬೇಕು ಅಲ್ಲದೇ ಇಲಾಖೆಯಿಂದ ‘ಲಂಪಿಸ್ಕಿನ್’ ಹತೋಟಿಗೆ ತರಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link