ಬೆಂಗಳೂರು
ಮೆಡಿಕಲ್ ಕಾಲೇಜಿಗೆ ಸಂಬಂಧಪಟ್ಟಂತೆ ಯಾವುದೇ ಗೊಂದಲ ಇಲ್ಲ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಎಂದು ಈಗಾಗಲೇ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟ ಪಡಿಸಿದರು.
ಅವರು ನಗರದ ಡಾಲರ್ಸ್ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಮೆಡಿಕಲ್ ಕಾಲೇಜಿಗೆ ಸಂಬಂಧಪಟ್ಟಂತೆ ಯಾವುದೇ ಗೊಂದಲ ಇಲ್ಲ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಎಂದು ಈಗಾಗಲೇ ನಿರ್ಧರಿಸಲಾಗಿದೆ. ತಾಲ್ಲೂಕಿಗೆ ಒಂದು ಕಾಲೇಜು ಕೊಡುವುದಕ್ಕಾಗುವುದಿಲ್ಲ. ಇದರ ಬಗ್ಗೆ ನಾನು ಡಿ.ಕೆ ಶಿವಕುಮಾರ್ ಬಳಿ ಮಾತನಾಡುತ್ತೇನೆ ಎಂದರು.
ಟಿಪ್ಪು ಸುಲ್ತಾನ್ ಪಠ್ಯ ತೆಗೆಯುವ ವಿಚಾರದ ಕುರಿತು ಸಹ ಯಾವುದೇ ಗೊಂದಲ ಇಲ್ಲ. ಸುರೇಶ್ ಕುಮಾರ್ ಟಿಪ್ಪು ಸುಲ್ತಾನ್ ಪಠ್ಯದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಒಂದು ಸಮಿತಿ ಮಾಡಿದ್ದಾರೆ. ಆ ಸಮಿತಿ ವರದಿ ಬಂದ ಬಳಿಕ ನಿರ್ಧಾರ ತಗೆದುಕೊಳ್ಳಲಾಗುತ್ತದೆ. ಟಿಪ್ಪು ಸುಲ್ತಾನ್ ಸಂಬಂಧ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.
ಗುರುವಾರದ ಎಲ್ಲ ಪತ್ರಿಕೆಗಳಲ್ಲಿ ವಿವರವಾಗಿ ಜಾಹೀರಾತು ಕೊಡಲಾಗಿದೆ. ಸಿದ್ದರಾಮಯ್ಯ ಅವರು ಸರ್ಕಾರ ಸತ್ತು ಹೋಗಿದೆ ಅಂತ ಆರೋಪ ಮಾಡಿದ್ದಾರೆ. ನೆರೆ ಪರಿಹಾರ ಏನೂ ಮಾಡಿಲ್ಲ ಎಂದಿದ್ದಾರೆ. ಈಗಾಗಲೇ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬುಧವಾರ ಬಂದಾಗಲೂ ನೆರೆ ಸ್ಥಿತಿಗತಿ ಬಗ್ಗೆ ತಿಳಿಸಿದ್ದೇನೆ. ಅವರು ಇನ್ನಷ್ಟು ಸಹಕಾರ ಕೊಟ್ಟರೆ ಪರಿಹಾರ ಕಾರ್ಯ ಇನ್ನಷ್ಟು ವೇಗವಾಗಿ ಮಾಡಬಹುದು. ರಾಜ್ಯ ಸರ್ಕಾರ ನೆರೆ ಪರಿಹಾರ ಕಾಮಗಾರಿ ಉತ್ತಮವಾಗಿ ಮಾಡುತ್ತಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ