ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ ವಿವಿಧ ಪದಾಧಿಕಾರಿಗಳ ಆಯ್ಕೆ

ಹಿರಿಯೂರು:

      ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರಾದ ಹೆಚ್.ಪ್ರಕಾಶ್ ಬೀರಾವರ ಮತ್ತು ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ತಿಮ್ಮರಾಜು ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಲಿತ ಸಂಘರ್ಷ ಸಮಿತಿಗೆ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

      ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಕಾರ್ಯಾಧ್ಯಕ್ಷರನ್ನಾಗಿ ಹೆಚ್.ಆರ್.ಶಿವಮ್ಮ ಮತ್ತು ಹಿರಿಯೂರು ತಾಲ್ಲೂಕು ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರನ್ನಾಗಿ ಜಬೀವುಲ್ಲಾ(ಚಿಕನ್) ಮತ್ತು ಹಿರಿಯೂರು ನಗರ ಘಟಕದ ಕಾರ್ಯಾಧ್ಯಕ್ಷರನ್ನಾಗಿ ಹೆಚ್.ಓಬಣ್ಣ ಕೆ.ಎಂ.ಕೊಟ್ಟಿಗೆ ಇವರನ್ನು ಆಯ್ಕೆ ಮಾಡಿ, ಜಿಲ್ಲಾಧ್ಯಕ್ಷರಾದ ಹೆಚ್.ಪ್ರಕಾಶ್ ಬೀರಾವರ ರವರು ಆದೇಶ ನೀಡಿದರು.

     ಇಂದಿನ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಟಿ.ಚಂದ್ರಪ್ಪ ಚೇಳುಗುಡ್ಡ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ವಿಜಯಲಕ್ಷ್ಮೀ ಹಾಗೂ ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಟಿ.ಚಂದ್ರಪ್ಪ ಘಾಟ್, ತಾಲ್ಲೂಕು ಉಪಾಧ್ಯಕ್ಷರಾದ ವಿ.ಶಿವಕುಮಾರ್ ಇತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ