ಮೇರಾ ಬೂತ್ ಸಬ್ ಸೇ ಮಜಬೂತ್ ಕಾರ್ಯಕ್ರಮ

ಬೆಂಗಳೂರು

      ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಕೇಂದ್ರ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಗುರುವಾರ ನೇರ ವಿಡಿಯೋ ಸಂವಾದ ನಡೆಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಹತ್ವದ ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದರು

     ನಗರದಲ್ಲಿ ಬಿಜೆಪಿ ಏರ್ಪಡಿಸಿದ್ದ, ‘ಮೇರಾ ಬೂತ್ ಸಬ್ ಸೇ ಮಜಬೂತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರ ಜೊತೆ ವಿಡಿಯೋ ಸಂವಾದ ನಡೆಸಿದ ಅವರು,ಕೇಂದ್ರದ ಜನಪ್ರಿಯ ಯೋಜನೆಗಳನ್ನು ಜನರಿಗೆ ಮುಟ್ಟಿಸುತ್ತೀರುವ ಬೂತ್ ಮಟ್ಟದ ಕಾರ್ಯಕರ್ತರು ಸಿಪಾಯಿಗಳು ಇದ್ದಂತೆ ಎಂದು ಬಣ್ಣಿಸಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

        ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಹತ್ವದ ಯೋಜನೆಗಳನ್ನು ಜನರಿಗೆ ತಲುಪಿಸುವ ಕುರಿತು ಹಾಗೂ ಮೊದಲ ಬಾರಿಗೆ ಮತ ಚಲಾಯಿಸುವ ಯುವಕರನ್ನು ಮುಟ್ಟುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ನಮೋ ಆ್ಯಪ್

         ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ತಮ್ಮ ಮೊಬೈಲ್ ನಲ್ಲಿ ನಮೋ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು. ಬಳಿಕ, ದಿನಕ್ಕೆ ಸ್ವಲ್ಪ ಸಮಯ ಈ ಆ್ಯಪ್ ಬಳಕೆಗೆ ಮೀಸಲಿಡಬೇಕು.ಇದರ ವಿಷಯಗಳನ್ನು ಇತರರಿಗೂ ತಿಳಿಸಬೇಕು ಎಂದು ತಿಳಿಸಿದರು.

        ಕೆಲವರು ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿಲ್ಲ ಎನ್ನುತ್ತಿದ್ದರು.ಆದರೆ,2008ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು.ಅಷ್ಟೇ ಅಲ್ಲದೆ, 2018ರಲ್ಲಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿತು.

        ಕರ್ನಾಟಕದಲ್ಲಿರುವ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಜನಾದೇಶ ವಿರುದ್ಧವಾಗಿ ಆಡಳಿತ ಮಾಡುತ್ತಿದ್ದಾರೆ. ಕೇಂದ್ರದ ಕಾರ್ಯಕ್ರಮಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗಿಲ್ಲ.ಅಷ್‍ಏ ಅಲ್ಲದೆ, ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

       ಇದಕ್ಕೂ ಮೊದಲು ಸಂಸದ ಪಿ.ಸಿ.ಮೋಹನ್ ಮಾತನಾಡಿ, ವಿಡಿಯೋ ಸಂವಾದದಲ್ಲಿ ಕಾರ್ಯಕರ್ತರು ಲೋಕಸಭಾ ಚುಣಾವಣೆಗೆ ಸಂಬಂಧಿಸಿದ, ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳ ಕುರಿತು, ಆಯಾ ಲೋಕಸಭಾ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳ ಕುರಿತು ಅಥವಾ ಕೈಗೊಳ್ಳಬೇಕಾದ ಯೋಜನೆಗಳ ಕುರಿತು ಚರ್ಚೆಗಳನ್ನು ಮಾಡಿದರು ಎಂದರುಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ಪದಾಧಿಕಾರಿಗಳು, ಬೂತ್ ಮಟ್ಟದ ಕಾರ್ಯಕರ್ತರು ಪಾಲ್ಗೊಂಡಿದ್ದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link