ಮಿಂಚಿನ ಮತದಾನ ಜಾಗೃತಿ ಅಭಿಯಾನ ಜಾಥಾ

ಹಾವೇರಿ :

       ತಾಲೂಕ ಪಂಚಾಯತಿ ವತಿಯಿಂದ ದನದ ಮಾರುಕಟ್ಟೆಯಲ್ಲಿ ಮಿಂಚಿನ ಮತದಾನ ಜಾಗೃತಿ ಅಭಿಯಾನ ಜಾಥಾ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ನೇತೃತ್ವದಲ್ಲಿ ಜರುಗಿತು. ನಂತರ ಮಾತನಾಡಿದ ಅವರು ಮತದಾನ ಎನ್ನುವುದು ದೇಶದ ಭವಿಷ್ಯವನ್ನು ನಿರ್ಧರಿಸುವ ವ್ಯವಸ್ಥೆ. ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ.

       ಅಂದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ಸಿನ ಹಾದಿಯಲ್ಲಿ ಸಿಗಲಿದೆ ಎಂದು ತಿಳಿಸಿದರು. ಎಲ್ಲರೂ ತಮ್ಮ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಮತ್ತು ವಿವಿ ಪ್ಯಾಟ ಪ್ರಾತ್ಯಕ್ಷಿಕೆಯ ಸಂದರ್ಭದಲ್ಲಿ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವದ ಮೂಲ ಕ್ರಿಯೆಯಾಗಿರುವ ಮತದಾನದಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಕರಪತ್ರಗಳನ್ನು ಹಂಚುವ ಮುಖಾಂತರ ದನದ ವ್ಯಾಪರಸ್ಥರಿಗೆ ಮತ್ತು ದಲ್ಲಾಳಿಗಳಿಗೆ ಕರೆ ನೀಡಿದರು.

        ನಾವು ಮತದಾನ ಮಾಡುವುದಲ್ಲದೆ ನಮ್ಮ ಸುತ್ತಮುತ್ತಲಿನವರು ಮತದಾನ ಮಾಡುವಂತೆ ಪ್ರೇರೆಣೆ ನೀಡಬೇಕು ಮತ್ತು ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವ ಕುರಿತು, ತಿಳಿ ಹೇಳುವ ಮೂಲಕ ಮತದಾನ ಮಾಡುವಂತೆ ಪ್ರೇರೆಪಿಸಬೇಕು ಎಂದರು. ಕಾರ್ಯಕ್ರಮದಲ್ಲಿ ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಮತಿ ಪುಷ್ಪಲತಾ ಬಿದರಿ, ಎನ್ ಹೆಚ್ ಕರೆಗೌಡ್ರ, ಪ್ರಶಾಂತಯ್ಯ, ತಾಲೂಕ ಪಂಚಾಯತಿ ಸಿಬ್ಬಂದಿ ವರ್ಗದವರು, ಸೆಕ್ಟರ ಅಧಿಕಾರಿಳಾದ ಸಿ ಎಸ್ ಭಗವಂತಗೌಡ್ರ, ಚಂದ್ರಕಾಂತ ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link