ಬೆಂಗಳೂರು
ಗಾರ್ಮೆಂಟ್ಸ್ ನೌಕರರನ್ನು ಕರೆ ತರುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಇಬ್ಬರಿಗೆ ಕಾಲು ಮುರಿದು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಕನಕಪುರದ ಕಾಳೇಗೌಡನದೊಡ್ಡಿ ಬಳಿ ನಡೆದಿದೆ.ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಹಾಗೂ ಕಾಲು ಮುರಿದ ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವನೇಗೌಡನದೊಡ್ಡಿ ಬಳಿಯ 30 ಮಂದಿ ನೌಕರರನ್ನು ಲಗೂನಾ ಗಾರ್ಮೆಂಟ್ಸ್‍ಗೆ ಇಂದು ಬೆಳಿಗ್ಗೆ ಕರೆತರುತ್ತಿದ್ದ ಮಿನಿ ಬಸ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಉರುಳಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.ಚಾಲಕನ ಬದಲಿಗೆ ಗಾರ್ಮೆಂಟ್ಸ್‍ನ ಟೈಲರ್ ಓರ್ವ ಮಿನಿಬಸ್ ಚಲಾಯಿಸಿದ್ದೆ ಈ ದುರ್ಘಟನೆಗೆ ಕಾರಣವಾಗಿದೆ. ಕನಕಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
