ಬೆಂಗಳೂರು
ಸುಪ್ರಸಿದ್ಧ ಮೈಸೂರು ದಸರಾದಲ್ಲಿ ಏರ್ಪಡಿಸಿದ್ದ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಓಡುವ ಭರದಲ್ಲಿ ಮುಗ್ಗರಿಸಿ ಬಿದ್ದ ಘಟನೆ ನಡೆಯಿತು.
ಈ ಓಟದ ಸ್ಪರ್ಧೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡರೇ ಚಾಲನೆ ನೀಡಿದ್ದರು. ಬಳಿಕ ಹಿರಿಯರ 2 ಕಿ.ಮೀ ದೂರದ ಓಟದ ಸ್ಪರ್ಧೆಯಲ್ಲಿ ಸಚಿವರು ಭಾಗಿಯಾಗಿದ್ದರು.
ಆದರೆ ಓಟದಲ್ಲಿ ಪಂಚೆ ಎತ್ತಿಕಟ್ಟಿ ಓಡುವ ವೇಳೆ ಜಿ.ಟಿ. ದೇವೇಗೌಡ ಮುಗ್ಗರಿಸಿ ಬಿದ್ದಿದ್ದಾರೆ. ಬಳಿಕ ಜೊತೆಯಲ್ಲಿದ್ದವರು ಗೌಡರನ್ನು ಎಬ್ಬಿಸಿ ಸಂತೈಸಿದರು.
ದಸರಾ ಮಹೋತ್ಸವದಲ್ಲಿಂದು ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮ್ಯಾರಥಾನ್ ಓಟ ಆಯೋಜಿಸಲಾಗಿತ್ತು. ಪ್ರವಾ ಸೋದ್ಯಮ ಸಚಿವ ಸಾರಾ ಮಹೇಶ್ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸಣ್ಣ ಕೈಗಾರಿಕೆ ಸಚಿವ ಶ್ರೀನಿವಾಸ್ ಮ್ಯಾರಥಾನ್‍ಗೆ ಚಾಲನೆ ನೀಡಿದರು. ಮ್ಯಾರಥಾನ್‍ನಲ್ಲಿ ಮೈಸೂರಿನ ಜನತೆ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೇ ಮಕ್ಕಳು, ಯುವಕ, ಯುವತಿಯರು ಭಾಗಿಯಾಗಿದ್ದರು.
ಮ್ಯಾರಥಾನ್ ಉದ್ಘಾಟನೆಗೆ ಸಚಿವರು ಒಂದು ಗಂಟೆ ತಡವಾಗಿ ಆಗಮಿಸಿದರು. ಬೆಳಗ್ಗೆಯೇ ಆಗಮಿಸಿದ್ದ ಜನ ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ