ಮೈಸೂರು:
ಮುಂದಿನ ತಿಂಗಳ 3ನೇ ತಾರೀಕಿನ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಯಾವ ತೊಂದರೆಯಿಲ್ಲದೆ ಸುಗಮವಾಗಿ ನಡೆಯಬೇಕು ಎಂಬ ಕಾರಣಕ್ಕಾಗಿ ತಮ್ಮ ನಾಯಕತ್ವದಲ್ಲಿ ಸಮನ್ವಯ ಸಮಿತಿ ನೇಮಕ ಮಾಡಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯದ ಮೈತ್ರಿ ಸರ್ಕಾರ ಸುಭದ್ರವಾಗಿದೆ, ರೈತರ ಸಾಲ ಮನ್ನಾ ಮಾಡುವ ನಿರ್ಧಾರದಿಂದ ಮೈತ್ರಿ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತಿದೆ, ಸರ್ಕಾರವನ್ನು ಅಭದ್ರಗೊಳಿಸಲು ಯಾವ ಶಾಸಕರೂ ಪ್ರಯತ್ನ ಮಾಡಿಲ್ಲ ಒಂದು ವೇಳೆ ಪ್ರಯತ್ನ ಮಾಡಿದರೂ ಅದು ಫಲಕಾರಿಯಾಗುವುದಿಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆಯ ಬಳಿಕ ನಿಗಮ-ಮಂಡಳಿಗಳಿಗೂ ನೇಮಕಾತಿ ನಡೆಯಲಿದ್ದು, ತಾತ್ಕಾಲಿಕವಾಗಿ ನಿರ್ಧಾರ ಮಾಡಿರುವಂತೆ 20 ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿ ನೇಮಕಾತಿಯಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ