ಬೆಳಗಾವಿ ಅಧಿವೇಶನದೊಳಗೆ ಸಂಪುಟ ವಿಸ್ತರಣೆ : ದಿನೇಶ್‍ಗುಂಡೂರಾವ್

ಬೆಂಗಳೂರು

         ಮುಂಬರುವ ಬೆಳಗಾವಿ ಅಧಿವೇಶನದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು.

        ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಹೇರಲು ಕೆಲ ಕಾಂಗ್ರೆಸ್ ಶಾಸಕರು ಇಂದು ಮುಂಬೈಗೆ ತೆರಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ಶಾಸಕರು ಎಲ್ಲಿಗೆ ಬೇಕಾದರೂ ಹೋಗಲಿ, ಯಾರನ್ನೂ ಹಿಡಿದಿಟ್ಟುಕೊಂಡಿಲ್ಲ. ಆದರೆ ಸಂಪುಟ ವಿಸ್ತರಣೆ ಡಿ. 10 ರೊಳಗೆ ಆಗಲಿದೆ ಎಂದರು.

       ಶಾಸಕರಿಗೆ ಸಂಪುಟ ವಿಸ್ತರಣೆಯಾಗಬೇಕು, ನಿಗಮ ಮಂಡಳಿ ಭರ್ತಿಯಾಗಬೇಕು, ಕ್ಷೇತ್ರದಲ್ಲಿ ಕೆಲಸ ಆಗಬೇಕು ಎಂಬ ಆಶಯ ಹೊಂದಿದ್ದಾರೆ. ಆದರೆ ಯಾರೂ ಪಕ್ಷ ಬಿಡುವ, ಸರ್ಕಾರಕ್ಕೆ ತೊಂದರೆ ಕೊಡುವ ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸದರು.

      ಕಾಂಗ್ರೆಸ್ ಶಾಸಕರು ದೆಹಲಿ, ಮುಂಬೈ, ಸಿಂಗಾಪೂರ್ ಎಲ್ಲಿಗೆ ಬೇಕಾದರೂ ಹೋಗಬಹುದು, 10 ಜನ ಅಲ್ಲ, 50 ಜನ ಬೇಕಾದರೂ ಹೋಗಬಹುದು. ಅದೇನು ದೊಡ್ಡ ವಿಚಾರವಲ್ಲ ಎಂದರು.

ಡಿ. 8 ಶಾಸಕಾಂಗ ಪಕ್ಷದ ಸಭೆ

      ಸಂಪುಟ ವಿಸ್ತರಣೆ ಸೇರಿದಂತೆ ಹಲವು ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲು ಬರುವ ಡಿ. 8 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗಿಯಾಗುವ ಸಾಧ್ಯತೆ ಇದೆ ಎಂದರು.

      ಈ ಸಭೆಯಲ್ಲಿ ಶಾಸಕರ ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಕೇಳುತ್ತಾರೆ. ಸಮಸ್ಯೆಗಳಿದ್ದರೆ ಆಗಲೇ ಕುಳಿತು ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದರು.

       ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರುವ ಬಗ್ಗೆ ಬಣ್ಣ ಕಟ್ಟುವ ಅವಶ್ಯಕತೆ ಇಲ್ಲ. ಯಾರಾದರೂ ಯಾರ ಮನೆಗೆ ಹೋದರೆ ಪಕ್ಷ ಸೇರುತ್ತಾರೆ ಎಂಬ ಸುದ್ದಿಯಾಗುತ್ತದೆ. ಯಡಿಯೂರಪ್ಪನವರೇ ಕಾಂಗ್ರೆಸ್ ಪಕ್ಷ ಸೇರಬಹುದು ಎಂದು ವ್ಯಂಗ್ಯವಾಡಿದರು.

       ಕಾಂಗ್ರೆಸ್‍ನ ಯಾವ ಶಾಸಕರೂ ಎಲ್ಲಿಗೂ ಹೋಗುತ್ತಿಲ್ಲ. ನಾನು ಈಗಷ್ಟೆ ಹಲವು ಶಾಸಕರ ಜತೆ ಮಾತನಾಡಿದ್ದೇನೆ ಎಂದು ದಿನೇಶ್‍ಗುಂಡೂರಾವ್ ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap