ಮನ್‍ಕಿ ಬಾತ್ ರೇಡಿಯೋ ಕಾರ್ಯಕ್ರಮಕ್ಕೆ ಗೈರಾದ ಶಾಸಕರು

ಹರಪನಹಳ್ಳಿ
   
        ಪ್ರಧಾನಿ ನರೇಂದ್ರ ಮೋದಿಯವರ ಮನೆ ಕಿ ಬಾತ್ ರೇಡಿಯೋ ಕಾರ್ಯಕ್ರಮಕ್ಕೆ ನಗರದಲ್ಲಿ ಉಪಸ್ಥಿರಿದ್ದ ಮಾನ್ಯ ಶಾಸಕರು ಗೈರಾಗಿದ್ದೇಕೆ ಎಂದು ತಿಳಿದಿಲ್ಲ ಎಂದು  ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಲಕ್ಷ್ಮಣ್ ಪ್ರಶ್ನಿಸಿದರು.
          ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ನಿಗಧಿಯಾದ ಸಮಯಕ್ಕೆ ಜರುಗಿದ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಪ್ರಧಾನಿಯವರ ವಿಶೇಷ ಕಾರ್ಯಕ್ರಮಕ್ಕೆ ಗೈರಾಗಿರುವ ಮುಖಂಡರು ಕಾರ್ಯಕರ್ತರುಗಳಿಗೆ ಕಾರ್ಯಕ್ರಮಕ್ಕೆ ಗೈರು ಹಾಜರಾದ ಬಗ್ಗೆ ಕಾರಣಕೇಳಿ ನೋಟೀಸು ನೀಡುತ್ತೇನೆ. ಸಮಂಜಸ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮಕ್ಕಾಗಿ  ಪಕ್ಷದ ವರಿಷ್ಟರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರುಗಳಿಗೆ ದೂರು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
         ಕಾರ್ಯಕ್ರಮದಲ್ಲಿ ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ, ಗ್ರಾಮ ಘಟಕದ ಕೆಲ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಜನರು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ ಎಂದರು.

 

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link