ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾದ ಶಾಸಕರು

ಬೆಳಗಾವಿ

        ಉತ್ತರಕರ್ನಾಟಕಕ್ಕೆ ಅಭಿವೃದ್ಧಿ ಮತ್ತು ರಾಜಕೀಯವಾಗಿ ಅನ್ಯಾಯ ಸರಿಪಡಿಸಲು ಕಾಂಗ್ರೆಸ್ ಶಾಸಕರು ಪಕ್ಷ ಮತ್ತು ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಸೋಮವಾರ ಸಂಜೆ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ರಹಸ್ಯ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ದಪಡಿಸಲು ಮುಂದಾಗಿದ್ದಾರೆ.

        ಉತ್ತರ ಕರ್ನಾಟಕಕ್ಕೆ ರಾಜಕೀಯ ಸ್ಥಾನಮಾನ ನೀಡದೆ, ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಭಾಗಕ್ಕೆ ಸೀಮಿತವಾಗಿರುವುದು, ಸಚಿವ ಸ್ಥಾನ, ಪ್ರಮುಖ ಹುದ್ದೆಗಳ ನೇಮಕ, ಅನುದಾನ ನೀಡಿಕೆಯಲ್ಲೂ ತಾರತಮ್ಯ ನೀತಿ ಅನುಸರಿಸುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ.

        ಜೊತೆಗೆ ಇಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವೆಲ್ಲಾ ವಿಚಾರಗಳನ್ನು ಚರ್ಚಿಸಬೇಕೆಂದು ಪ್ರತ್ಯೇಕ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ. ಶಾಸಕಾಂಗ ಸಭೆಯಲ್ಲಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪ್ರತ್ಯೇಕ ಮನವಿ ಸಲ್ಲಿಸುವ ಸಾಧ್ಯತೆ ಇದೆ. ಅಸಮಾಧಾನಿತ ಶಾಸಕರ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ ಮೈತ್ರಿ ಸರ್ಕಾರದ ವಿರುದ್ದ ಬಹಿರಂಗ ಹೋರಾಟಕ್ಕಿಳಿಯುವ ಎಚ್ಚರಿಕೆಯನ್ನು ಶಾಸಕರು ನೀಡುವ ಸಾಧ್ಯತೆ ಇದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link