ಬೆಂಗಳೂರು:
ಪೌರತ್ವ ಕಾಯ್ದೆ ವಿಷಯದಲ್ಲಿ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ಜಪ ಮಾಡುವ ಇವರು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ?ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಟ್ವೀಟ್ ಮೂಲಕ ಮೋದಿ ವಿರುದ್ಧ ಕಿಡಿಕಾರಿದ ಅವರು, ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ಮತ ನೀಡಿದ್ದಾರೆಯೋ? ಭಾರತದ ಪ್ರಜೆಗಳು ಮತ ಹಾಕಿದ್ದಾರೆಯೇ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ? ಎಂದು ಕೇಳಿದ್ದಾರೆ.
ಭಾರತೀಯರ ಮತ ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ಮೋದಿಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ಅವರಿಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ? ಎಂದು ಸವಾಲು ಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ