ಬೆಂಗಳೂರು:
ನಮ್ಮ ತಂದೆ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿಯಿಂದ ಶಾಸಕ ಜಾಧವ್ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಬಂದು ನಿಂತರೂ ಸ್ವಾಗತ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮದ್ದೂರಿನಲ್ಲಿ ಹೇಳಿದರು.
ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ಎದುರು ಯಾರು ಬೇಕಾದರೂ ಸ್ಪರ್ಧೆ ಮಾಡಲಿ. ಬಿಜೆಪಿಯ ಯಾರೇ ಸ್ಪರ್ಧಿಸಿದರು ನಾವು ಕೂಡಾ ಸ್ಪರ್ಧಿಸಲು ತಯಾರಿದ್ದೇವೆ ಎಂದರು.
ಇನ್ನು ಸುಮಲತಾ ಸ್ಪರ್ಧೆ ಹೈಕಮಾಂಡ್ಗೆ ಬಿಟ್ಟ ವಿಚಾರ. ನಾನು ಆ ಮಟ್ಟಕ್ಕೆ ಬೆಳೆದಿಲ್ಲ. ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಮಾಡಿ ಟಿಕೆಟ್ಬಗ್ಗೆ ತೀರ್ಮಾನಿಸುತ್ತಾರೆ. ಕಾಂಗ್ರೆಸ್ ಮೈತ್ರಿಯಿಂದ ಅಸ್ತಿತ್ವಕ್ಕೆ ಧಕ್ಕೆಯಿಲ್ಲ. ಪಕ್ಷಕ್ಕೆ 130 ವರ್ಷದ ಇತಿಹಾಸವಿದೆ. ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಿಲ್ಲ ಎಂದರು.
ಬಡ್ತಿ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಪ್ರಯತ್ನ ಮಾಡಿದ್ದೇವೆ. ಅಹಿಂದಾ, ಎಸ್ಸಿ-ಎಸ್ಟಿ ಪಂಗಡಕ್ಕೆ ಅನ್ಯಾಯವಾಗದಂತೆ ಕಾನೂನು ಮಂತ್ರಿ ಹಾಗೂ ಮುಖ್ಯಮಂತ್ರಿ ಜತೆ ಚರ್ಚೆ ನಡೆಸುತ್ತೇವೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








