ಚಿತ್ರದುರ್ಗ;
ಕಳೆದ ಐದು ವರ್ಷಗಳಲ್ಲಿ ಮೋದಿ ಸರ್ಕಾರ ಮಾಡಿರುವ ಅಭಿವೃದ್ದಿ ಕಾರ್ಯಕ್ಕೆ ದೇಶದ ಜನರು ಈ ಚುನಾವಣೆಯಲ್ಲಿ ಬೆಂಬಲ ನೀಡಲಿದ್ದಾರೆಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು
ಚಿತ್ರದುರ್ಗ ಲೋಕಸಭಾ ಚುನಾವಣೆಯಕಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರು, ಮೋದಿ ಅವರು ಪ್ರಧಾನಿಯಾದ ಬಳಿಕ ದೇಶ ಪ್ರಗತಿ ಕಂಡಿದೆ. ದೇಶದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು, ಆರ್ಥಿಕ ಸ್ಥಿತಿಯೂ ಸುಧಾರಿಸಿದೆ ಎಂದರು
ಬಡವರು, ಕೂಲಿ ಕಾರ್ಮಿಕರು, ರೈತರು ಒಳಗೊಂಡಂತೆ ಎಲ್ಲರಿಗೂ ಮೋದಿ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿದೆ. ಈ ಕಾರಣಕ್ಕಾಗಿಯೇ ಜನರು ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆಂದು ನುಡಿದರು
ಕಳೆದ ಬಾರಿ ಕೆಲವು ಕಾರಣಗಳಿಂದ ನಾವು ಈ ಕ್ಷೇತ್ರದಲ್ಲಿ ಸೋಲು ಕಾಣಬೇಕಾಯಿತು. ಆದರೀಗ ಪರಿಸ್ಥಿತಿ ಬದಲಾಗಿದ್ದು, ನಮ್ಮ ಪಕ್ಷದ ಅಭ್ಯರ್ಥಿ ನಾರಾಯಣಸ್ವಾಮಿ ಅವರು ಅತೀ ಹೆಚ್ಚು ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು
ನಗರದ ಕೃಷ್ಟಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮತದಾನ ಕೇಂದ್ರ 178ರಲ್ಲಿ ಮತದಾನ ಮಾಡಿದ ಶಾಸಕರ ಜೊತೆಯಲ್ಲಿ ಅವರ ಪತ್ನಿ ಅನುರಾಧ ಮಗ ಮತ್ತು ಮಗಳು ಸಹಾ ಭಾಗವಹಿಸಿದ್ದು ಸರತಿ ಸಾಲಿನಲ್ಲಿ ನಿಲ್ಲುವುದರ ಮೂಲಕ ಸಾಮಾನ್ಯರಂತೆ ಆಗಮಿಸಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ತಿಮ್ಮಣ್ಣ ಸೇರಿದಂತೆ ಗುಮಾಸ್ತ ಕಾಲೋನಿಯ ಮುಖಂಡರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರ ಹೊಣೆ :
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪಿಯ ವಿವಿಧ ಮತದಾನ ಕೇಂದ್ರಗಳಲ್ಲಿ ಮತದಾರರು ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮತದಾನವನ್ನು ಬಹಿಷ್ಕಾರ ಮಾಡಿದ್ದಾರೆ ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ತಿಪ್ಪಾರೆಡ್ಡಿ ಹೇಳಿದರು.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಸರಿಯಾದ ರೀತಿಯಲ್ಲಿ ಆಡಳಿತ ನಡೆಸುತ್ತಿಲ್ಲ. ಅಭಿವೃದ್ದಿ ಕುಂಠಿತವಾಗಿದೆ. ಸರ್ಕಾರದ ವಿರುದ್ದ ಜನರು ರೋಸಿ ಹೋಗಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ಸೂಕ್ತ ಪಾಠ ಕಲಿಸಲಿದ್ದಾರೆಂದು ಹೇಳಿದರು