ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಬಿಜೆಪಿ.ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ನಾರಾಯಣಸ್ವಾಮಿ ಪರ ಮತಯಾಚನೆಗಾಗಿ ಏ.8 ರಂದು ದೇಶದ ಪ್ರಧಾನಿ ನರೇಂದ್ರಮೋದಿ ಚಿತ್ರದುರ್ಗಕ್ಕೆ ಆಗಮಿಸುತ್ತಿರುವುದರಿಂದ ದಾವಣಗೆರೆ ಪೂರ್ವವಲಯದ ಪೊಲೀಸ್ ಮಹಾನಿರೀಕ್ಷಕರಾದ ಸೋಮೇಂದ್ರ ಮುಖರ್ಜಿರವರು ಬಧುವಾರ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಿದ್ದತೆಯನ್ನು ವೀಕ್ಷಿಸಿ. ಸೂಕ್ತ ಬಂದೋಬಸ್ತ್ ಏರ್ಪಡಿಸುವಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್, ಲೋಕಸಭಾ ಚುನಾವಣೆ ಉಸ್ತುವಾರಿ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಖಜಾಂಚಿ ನರೇಂದ್ರ, ಜಿತೇಂದ್ರ,ಮೋಹನ್, ಜಿಲ್ಲಾ ರಕ್ಷಣಾಧಿಕಾರಿ ಡಾ.ಅರುಣ್ ಕೆ., ಡಿ.ವೈ.ಎಸ್ಪಿ. ಸಂತೋಷ್ ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
