ವಿಪಕ್ಷ ನಾಯಕರಲ್ಲಿ ಮೋದಿ ವಿನಂತಿ…!!!

ನವದೆಹಲಿ:

       ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷದ ನಾಯಕರು , ರಾಜ್ಯದ ಸಿಎಂಗಳು, ನಟ-ನಟಿಯರು, ಕ್ರೀಡಾಪಟುಗಳಲ್ಲಿ ಒಂದು ವಿನಂತಿ ಮಾಡಿಕೊಂಡಿದ್ದಾರೆ

        ಅದೇನೆಂದರೆ ಎಲ್ಲರೂ ಮರೆಯದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಟ್ವಿಟ್ಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

        ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ಮತ ಚಲಾಯಿಸುವಂತೆ ಅವರ ಗಮನ ಸೆಳೆಯುವುದರ ಬಗ್ಗೆ ಗಮನಹರಿಸೋಣ. ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಭಾರತವನ್ನು ಬಲಪಡಿಸೋಣ ಎಂದು ಬರೆದು, ಕರ್ನಾಟಕ ಸಿಎಂ ಕುಮಾರಸ್ವಾಮಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ವೈಎಸ್‍ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮೂಲಕ ಮೋದಿ ಕರೆ ನೀಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link