ಚಿತ್ರದುರ್ಗ:
ಬಿಜೆಪಿ.ಮುಖಂಡರು, ಕಾರ್ಯಕರ್ತರ ಪರಿಶ್ರಮ, ಕ್ಷೇತ್ರದ ಮತದಾರರ ಆಶೀರ್ವಾದ ಹಾಗೂ ಪ್ರಧಾನಿ ಮೋದಿರವರು ಚಿತ್ರದುರ್ಗದ ರ್ಯಾಲಿಗೆ ಆಗಮಿಸಿದ ಪರಿಣಾಮವಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ.ಅಭ್ಯರ್ಥಿ ಆನೆಕಲ್‍ನಾರಾಯಣಸ್ವಾಮಿ ಗೆಲುವಿಗೆ ಹಾದಿ ಸುಗಮವಾಯಿತು ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಸಂತಸ ವ್ಯಕ್ತಪಡಿಸಿದರು.
ಚಿತ್ರದುರ್ಗ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಂದ ನಂತರ ನಗೆ ಬೀರುತ್ತ ಆಗಮಿಸಿದ ಬಿಜೆಪಿ.ಅಭ್ಯರ್ಥಿ ಆನೆಕಲ್ ನಾರಾಯಣಸ್ವಾಮಿಗೆ ಬಿಜೆಪಿ.ಕಾರ್ಯಾಲದಯಲ್ಲಿ ಅಭಿನಂದಿಸಿ ಮಾತನಾಡಿದ ಕೆ.ಎಸ್.ನವೀನ್ ಕಾಂಗ್ರೆಸ್-ಜೆಡಿಎಸ್.ಮೈತ್ರಿ ಮಾಡಿಕೊಂಡರು ನಮ್ಮ ಜಿಲ್ಲೆಯ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಪೂರ್ಣಿಮ ಶ್ರೀನಿವಾಸ್, ಬಿ.ಶ್ರೀರಾಮುಲು ಇವರುಗಳ ಸತತ ಪರಿಶ್ರಮದ ಫಲವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನೆಕಲ್ ನಾರಾಯಣಸ್ವಾಮಿಯನ್ನು ಗೆಲ್ಲಿಸಿಕೊಂಡು ಪ್ರಧಾನಿ ಮೋದಿಗೆ ಕೊಡುಗೆ ನೀಡಲು ಸಾಧ್ಯವಾಯಿತು.
ಮುಂದಿನ ಐದು ವರ್ಷಗಳಲ್ಲಿ ಚಿತ್ರದುರ್ಗ ಜಿಲ್ಲೆ ಹೆಚ್ಚಿನ ಅಭಿವೃದ್ದಿಯಾಗಲಿದೆ ಎನ್ನುವ ನಿರೀಕ್ಷೆಯಿಟ್ಟುಕೊಂಡಿದ್ದೇವೆ. ಅದಕ್ಕೆ ತಕ್ಕಂತೆ ಎ.ನಾರಾಯಣಸ್ವಾಮಿ ಕ್ಷೇತ್ರದ ಏಳಿಗೆಗೆ ಗಮನ ಕೊಡಲಿ ಎಂದು ಹಾರೈಸಿದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ.ಯವರೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರೂ ನಮ್ಮ ನಿರೀಕ್ಷೆಗೆ ಮೀರಿ ಪಕ್ಷದ ಅಭ್ಯರ್ಥಿ ಎ.ನಾರಾಯಣಸ್ವಾಮಿಗೆ ಮತಗಳು ಲಭಿಸಿವೆ. ಜೆಡಿಎಸ್.ಕಾಂಗ್ರೆಸ್ ಪ್ರಾಬಲ್ಯವಿರುವ ಸಿರಾ, ಪಾವಗಡದಲ್ಲೂ ಹೆಚ್ಚಿನ ಮತಗಳು ಸಿಕ್ಕಿವೆ. ಇದಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರ ಕಠಿಣ ಪರಿಶ್ರಮವೇ ಕಾರಣ ಎನ್ನುವುದರಲ್ಲಿ ಅನುಮಾನವಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆದ್ದೇ ಗೆಲ್ಲುತ್ತಾರೆಂಬ ದೃಢನಂಬಿಕೆಯಲ್ಲಿದ್ದ ಕಾಂಗ್ರೆಸ್‍ನವರು ನಮ್ಮ ಅಭ್ಯರ್ಥಿ ಎ.ನಾರಾಯಣಸ್ವಾಮಿ ಮುನ್ನಡೆ ಸಾಧಿಸುತ್ತಿದ್ದಂತೆ ಒಬ್ಬೊಬ್ಬರೆ ಟೇಬಲ್‍ನಿಂದ ಓಟ ಕಿತ್ತರು ಎಂದು ವ್ಯಂಗ್ಯವಾಡಿದರು.
ಚುನಾವಣೆ ಪೂರ್ವದಲ್ಲಿ ದೇಶದ ಪ್ರಧಾನಿ ನರೇಂದ್ರಮೋದಿ ಚಿತ್ರದುರ್ಗಕ್ಕೆ ಆಗಮಿಸಿದ್ದು, ಹಾಗೂ ಬಿಜೆಪಿ.ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಚಳ್ಳಕೆರೆಗೆ ಆಗಮಿಸಿ ನಮ್ಮ ಅಭ್ಯರ್ಥಿ ಪರ ಮತಯಾಚಿಸಿದ್ದು, ಚುನಾವಣೆಯಲ್ಲಿ ಪಕ್ಷಕ್ಕೆ ವರದಾನವಾಯಿತು. ಹಾಗಾಗಿ ಆನೆಕಲ್ ನಾರಾಯಣಸ್ವಾಮಿ ಗೆಲುವಿಗೆ ಶ್ರಮಿಸಿದ ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೆ.ಎಸ್.ನವೀನ್ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.
ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಜಿ.ಎಂ.ಸುರೇಶ್, ಟಿ.ಜಿ.ನರೇಂದ್ರನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ಮುರಳಿ, ರತ್ನಮ್ಮ, ಜೈಪಾಲ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ಸಂಪತ್‍ಕುಮಾರ್, ಜಿ.ಹೆಚ್.ಮೋಹನ್, ಶ್ಯಾಮಲ ಶಿವಪ್ರಕಾಶ್, ರೇಖ ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.