ಮಾಸಾಂತ್ಯದಲ್ಲಿ ರಾಜ್ಯಕ್ಕೆ ಮೋದಿ

ವಿಜಯಪುರ

          ದೇಶಾದ್ಯಂತ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ವ್ಯಾಪಕ ಸಿದ್ಧತೆ ನಡೆಸುತ್ತಿರುವ ಬೆಳವಣಿಗೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಈ ಮಾಸಾಂತ್ಯದಲ್ಲಿ ರಾಜ್ಯಪ್ರವಾಸ ಕೈಗೊಳ್ಳಲಿದ್ದಾರೆ.

          ವಿಜಯಪುರದ ಸಿದ್ದೇಶ್ವರ ಸಂಸ್ಥೆ ನಗರದಲ್ಲಿ ಡಿ. 24ರಿಂದ ಭಾರತೀಯ ಸಂಸ್ಕೃತಿ ಉತ್ಸವ ಹಮ್ಮಿಕೊಂಡಿದ್ದು, ಡಿ.31ರಂದು ನಡೆಯಲಿರುವ ‘ಧರ್ಮ ಮತ್ತು ಸಂಸ್ಕೃತಿ ಸಂಗಮ’ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆಯಲ್ಲಿ ಮೋದಿ ಅವರ ರಾಜ್ಯ ಭೇಟಿ ಮಹತ್ವ ಪಡೆದುಕೊಂಡಿದೆ.

           ರಾಜ್ಯದಲ್ಲಿ 24ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯೊಂದಿಗೆ ರಾಜ್ಯ ಬಿಜೆಪಿ ನಾಯಕರು ರಾಜಕೀಯ ತಂತ್ರಗಾರಿಕೆ ರೂಪಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ, ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

         ನಗರದ ರಾಮನಗೌಡ ಬಾಪುಗೌಡ ಪಾಟೀಲ ಗೋರಕ್ಷಾ ಕೇಂದ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪತಂಜಲಿ ಯೋಗಪೀಠದ ಬಾಬಾ ರಾಮದೇವ , ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೆಕರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಭಾರತ ವಿಕಾಸ ಸಂಗಮದ ಸಂಸ್ಥಾಪಕ ಬಸವರಾಜ ಪಾಟೀಲ ಸೇಡಮ್, ಸಚಿವೆ ಜಯಮಾಲಾ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link