ಚಿತ್ರದುರ್ಗ;
ಭಾರತೀಯ ಜನತಾ ಪಾರ್ಟಿಯ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಬಿಜೆಪಿ ಯುವ ಮುಖಂಡ ರಘುಚಂದನ್ ಹೇಳಿದ್ದಾರೆ
ದೇಶದಲ್ಲಿ ಹಲವು ಹಂತದ ಸಾರ್ವತ್ರಿಕ ಚುನಾವಣೆಗಳು ನಡೆಯುತ್ತಿದ್ದು, ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಮತದಾನವಾಗಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಎಲ್ಲಾ ರಾಜ್ಯಗಳಲ್ಲಿ ಮತದಾರರು ಮತ್ತೆ ಮೋದಿ ಅವರಿಗೆ ಬೆಂಬಲ ಸೂಚಿಸಿದ್ದು, ಕಳೆದ ಬಾರಿಗಿಂತ ಈ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನಗಳು ಲಬ್ಯವಾಗಲಿವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ
ಕರ್ನಾಟಕದಲ್ಲಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಗುರಿ ಹೊಂದಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿಗೆ 22ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಎಂದಿದ್ದಾರೆ
ಚಿತ್ರದುರ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲಿದೆ. ನರೇಂದ್ರ ಮೋದಿ ಅವರು ಜಿಲ್ಲೆಗೆ ಬಂದು ಹೋದ ನಂತರ ಇಡೀ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಯುವಕರು, ವಿದ್ಯಾವಂತರು ಸೇರಿದಂತೆ ಬಾರಿ ಜನಬೆಂಬಲ ವ್ಯಕ್ತವಾಗಿದೆ ಎಂದು ರಘುಚಂದನ್ ತಿಳಿಸಿದ್ದಾರೆ
ಕೇಂದ್ರದಲ್ಲಿ ಐದು ವರ್ಷಗಲ ಕಾಲ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಘನತೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಇಂದು ಇಡೀ ಜಗತ್ತು ಭಾರತದ ಕಡೆಗೆ ನೋಡುವಂತಾಗಿದೆ. ಇಂತಹ ನಾಯಕ ಈ ದೇಶಕ್ಕೆ ಅನಿವಾರ್ಯ ಎಂಬುದನ್ನು ಇಡೀ ದೇಶದ ಜನರು ಹೇಳುತ್ತಿದ್ದಾರೆಂದು ತಿಳಿಸಿದ್ದಾರೆ
ಯಾವ ಸರ್ಕಾರಗಳೂ ಮಾಡದ ಅಭಿವೃದ್ದಿ ಕೆಲಸಗಳನ್ನು ಮೋದಿ ಮಾಡಿದ್ದಾರೆ. ದೇಶದ ಆರ್ಥಿಕ ಸ್ಥಿತಿಯೂ ಸಾಕಷ್ಟು ಸುಧಾರಣೆಯಾಗಿದೆ. ಈ ದೇಶದ ಬಡವರು, ಮಹಿಳೆಯರು, ರೈತರು ಹಾಗೂ ಕಾರ್ಮಿಕರಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ
ಈ ಚುನಾವಣೆಯಲ್ಲಿ ದೇಶದ ಮತದಾರರು ಮೋದಿ ಅವರಿಗೆ ಬೆಂಬಲಿಸಿದ್ದು, ಅವರ ನಾಯಕತ್ವದಲ್ಲಿ ಭಾರತ ಇನ್ನಷ್ಟು ಅಭಿವೃದ್ದಿ ಹೊಂದಲಿದೆ. ಮೋದಿ ಅವರ ಚುನಾವಣಾ ರ್ಯಾಲಿಗಳಲ್ಲಿ ಲಕ್ಷಾಂತರ ಜನರು ಸ್ವಯಂ ಪ್ರೇರಿತರಾಗಿ ಭಾಗವಹಿಸುತ್ತಿರುವುದು ನೋಡಿದರೆ ಈ ಚುನಾವಣೆಯಲ್ಲಿ ದಾಖಲೆಯ ಫಲಿತಾಂಶ ಬರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ರಘುಚಂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಮೈತ್ರಿ ಸರ್ಕಾರ ಪತನ;
ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದ್ದು, ಮತ್ತೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ರಘುಚಂದನ್ ಹೇಳಿದ್ದಾರೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಅಧಿಕಾರವೇ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ದಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಇದರಿಂದ ಎರಡೂ ಪಕ್ಷಗಳ ಶಾಸಕರುಗಳು ಅಸಮಧಾನದಲ್ಲಿದ್ದಾರೆಂದು ಹೇಳಿದರು ರಾಜ್ಯದಲ್ಲಿ ಈ ಬಾರಿ ಬರದ ಪರಿಸ್ಥಿತಿ ಗಂಭೀರವಾಗಿದೆ. ಕುಡಿಯುವ ನೀರು ಸಹ ಸಿಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರದ ವಿರುದ್ದ ಜನರು ಆಕ್ರೋಶಗೊಂಡಿದ್ದಾರೆ. ಈಗಾಗಲೇ ಕೆಲವು ಕಡೆ ಜನರು ಉದ್ಯೋಗಕ್ಕಾಗಿ ಊರು ತ್ಯಜಿಸುತ್ತಿರುವುದು ವರದಿಯಾಗುತ್ತಿವೆ. ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿಲ್ಲವೆಂದು ರಘುಚಂದನ್ ಆರೋಪಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
