ಬೆಳಗಾವಿ
ಬಟ್ಟೆ ಒಗೆಯುವ ವೇಳೆ ಬಾವಿಗೆ ಆಕಸ್ಮಿಕವಾಗಿ ಜಾರಿ ಬಿದ್ದು 45 ವರ್ಷದ ತಾಯಿ ಹಾಗೂ ಆಕೆಯ 20 ವರ್ಷದ ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಕಮತನೂರು ಗಯೆ ಕ್ರಾಸ್‍ನಲ್ಲಿಂದು ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಭಾರತಿ ಮತ್ತು ಆಕೆಯ ಮಗಳು ಶ್ರೀದೇವಿ ಕಮತೆ ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯುವುದಕ್ಕಾಗಿ ನೀರು ತರಲು ಶ್ರೀದೇವಿ ಬಾವಿ ಇಳಿದಾಗ ಆಕಸ್ಮಿಕವಾಗಿ ಜಾರಿ ನೀರಿನಲ್ಲಿ ಮುಳುಗಿದ್ದು, ಆಕೆಯನ್ನು ರಕ್ಷಿಸಲು ಹೋದ ತಾಯಿ ಭಾರತಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಾಯಿ ಮತ್ತು ಅಕ್ಕ ಎಷ್ಟು ಹೊತ್ತಾದರೂ ಬರದಿದ್ದಾಗ ಬಾವಿ ಹತ್ತಿರ ತೆರಳಿದ ಭಾರತಿಯವರ ಮತ್ತೊಬ್ಬ ಮಗಳಿಗೆ ಮೃತ ದೇಹಗಳು ತೇಲುತ್ತಿರುವುದು ಕಂಡು ಬಂದಿದೆ. ತಕ್ಷಣ ಆಕೆ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ.ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
