ದಾವಣಗೆರೆ:
ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ತಾಯಿ-ಮಗಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಜಿಲ್ಲೆಯಲ್ಲಿ ಹರಪನಹಳ್ಳಿ ಹಾಗೂ ಜಗಳೂರು ತಾಲೂಕುಗಳಲ್ಲಿ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡೆದು ಹರಪನಹಳ್ಳಿ ಹಾಗೂ ಜಗಳೂರು ತಾಲೂಕುಗಳಲ್ಲಿನ ತಲಾ ಇಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡದ ಜಮೀನಿನಲ್ಲಿ ಕೃಷಿ ವಟುವಟಿಕೆಯಲ್ಲಿ ತೊಡಗಿದ್ದ ಕವಿತಾಬಾಯಿ (28) ಹಾಗೂ ತಾಯಿಯ ಜೊತೆಗೆ ಜಮೀನಿಗೆ ಹೋಗಿದ್ದ ಮಗಳು ಶ್ವೇತಾ (10) ಮೃತಪಟ್ಟ ದುರ್ದೈವಿಗಳಾಗಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ, ಇಡೀ ಊರಿನ ಜನರು ಜಮೀನು ಬಳಿ ಧಾವಿಸಿದ್ದರು. ಮೃತರ ಕುಂಟುಂಬದ ಸದಸ್ಯರ ಆರ್ತನಾದ ಮುಗಿಲು ಮುಟ್ಟುವಂತಿತ್ತು.
ಘಟನೆಯಲ್ಲಿ ಕವನ, ಅಜಯ ಎಂಬುವವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ ಡಾ.ಮಧು ಭೇಟಿ ನೀಡಿ ಪರಿಶೀಲಿಸಿದರು. ಪ್ರಕೃತಿ ವಿಕೋಪದಡಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಕುರಿತು ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
