ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಜಿಲ್ಲಾಡಳಿತದಿಂದ ಮೌನಾಚರಣೆ

ಹಾವೇರಿ

        ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಜಿಲ್ಲಾಡಳಿತ ಕಟ್ಟಡದ ಒಳ ಆವರಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಅವರ ನೇತೃತ್ವದಲ್ಲಿ ಮೌನಾಚರಣೆ ನಡೆಸಲಾಯಿತು.

        ಮಹಾತ್ಮಗಾಂಧೀಜಿ ಅವರು ಹುತಾತ್ಮರಾದ ದಿನದ ಹಾಗೂ ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಮೌನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು ಹಾಗೂ ಗಾಂಧೀಜಿಯವರಿಗೆ ಪ್ರೀಯವಾದ ಹಾಡುಗಳ ಭಜನ ಕಾರ್ಯಕ್ರಮ ಆಯೋಜಿಸಲಾಗಿತ್ತು.

         ಅಪರ ಜಿಲ್ಲಾಧಿಕಾರಿ ವಿನೋದಕುಮಾರ ಹೆಗ್ಗಳಗಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸುರೇಶ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಚುನಾವಣಾ ಶಿರಸ್ತೇದಾರ ಪ್ರಶಾಂತ ನಾಲವಾರ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಗೌರವ ನಮನ ಸಲ್ಲಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link