ಹೊನ್ನಾಳಿ:
ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಿದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ಧೇಶ್ವರ್ ಅವರ ಪರವಾಗಿ ನಾವು ಮತಯಾಚಿಸುತ್ತಿದ್ದೇವೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾಧನೆಯ ವಿವರಗಳನ್ನೊಳಗೊಂಡ ಕರಪತ್ರಗಳನ್ನು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರಿಗೆ ವಿತರಿಸುವ ಮೂಲಕ ಮತಯಾಚಿಸಿ ಅವರು ಮಾತನಾಡಿದರು.ಜಿ.ಎಂ. ಸಿದ್ಧೇಶ್ವರ್ ಅವರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಸೈನಿಕರಂತೆ ಸಜ್ಜಾಗಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಾದ್ಯಂತ ಮತದಾರರ ಮನೆ ಬಾಗಿಲಿಗೆ ತೆರಳಿ ಹೆಚ್ಚಿನ ಮತ ನೀಡುವಂತೆ ಮನವಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಉಪಾಧ್ಯಕ್ಷ ಸಿ. ಸುರೇಂದ್ರನಾಯ್ಕ, ಸದಸ್ಯ ವೀರಶೇಖರಪ್ಪ, ತಾಪಂ ಸದಸ್ಯ ಕೆ.ಎಲ್. ರಂಗನಾಥ್, ಎಪಿಎಂಸಿ ನಿರ್ದೇಶಕ ಜಿವಿಎಂ ರಾಜು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಶಾಂತರಾಜ್ ಪಾಟೀಲ್, ಮುಖಂಡರಾದ ಕೆ.ಎಚ್. ಗುರುಮೂರ್ತಿ, ರಘು, ಕ್ಯಾಸಿನಕೆರೆ ನಟರಾಜಪ್ಪ, ಹಾಲೇಶಪ್ಪ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕಿನ ಸಾಸ್ವೆಹಳ್ಳಿ ಜಿಪಂ ಕ್ಷೇತ್ರದ ವ್ಯಾಪ್ತಿಯ ಕ್ಯಾಸಿನಕೆರೆ, ಭೈರನಹಳ್ಳಿ ಚೆನ್ನೇನಹಳ್ಳಿ, ಕುಳಗಟ್ಟೆ, ಹುಣಸಘಟ್ಟ, ಹನುಮನಹಳ್ಳಿ, ಸಾಸ್ವ್ವೆಹಳ್ಳಿ ಮುಂತಾದ ಗ್ರಾಮಗಳಲ್ಲಿ ತಾಲೂಕಿನ ಪಕ್ಷದ ಜನಪ್ರತಿನಿಧಿಗಳು, ಮುಖಂಡರೊಂದಿಗೆ ಪ್ರವಾಸ ನಡೆಸಿ “ದೇಶಕ್ಕೆ ಮತ್ತೊಮ್ಮೆ ಮೋದಿ ಅಭಿಯಾನ”ದಲ್ಲಿ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ಧೇಶ್ವರ್ ಪರವಾಗಿ ಹೆಚ್ಚಿನ ಮತನೀಡುವಂತೆ ಮತದಾರರಲ್ಲಿ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
