ಚಿತ್ರದುರ್ಗ:
ಜಿಲ್ಲಾ ಯೂತ್ ಕಾಂಗ್ರೆಸ್‍ನಿಂದ ನ.30 ರಂದು ಸಂಜೆ 4 ಗಂಟೆಗೆ ವಿಭಿನ್ನ ವಿಚಾರಗಳ ಮುಖಾಮುಖಿ ಕಾರ್ಯಕ್ರಮ ಕ್ರೀಡಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಡಾ.ಬಿ.ಯೋಗೇಶ್‍ಬಾಬು ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಸವನಗೌಡ ಬಾದರ್ಲಿ ಮುಖಾಮುಖಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳು, ವೃತ್ತಿಪರ ಶಿಕ್ಷಣ ವಿದ್ಯಾರ್ಥಿಗಳು, ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರು ಮುಖಾಮುಖಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸ್ತುತ ದೇಶ ಎದುರಿಸುತ್ತಿರುವ ಸಮಸ್ಯೆ ಹಾಗೂ ವಿವಿಧ ವಿಚಾರಗಳ ಕುರಿತು ಚರ್ಚಿಸಲು ವೇದಿಕೆಯನ್ನು ಕಲ್ಪಿಸಿದ್ದು, ಇದೇ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಧುಪಾಲೇಗೌಡ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ ವಿಭಿನ್ನ ವಿಚಾರಗಳ ಕುರಿತು ಚರ್ಚಿಸಲು ಹಮ್ಮಿಕೊಂಡಿರುವ ಮುಖಾಮುಖಿ ಕಾರ್ಯಕ್ರಮದಲ್ಲಿ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ, ಆಲ್ ಇಂಡಿಯಾ ಯೂತ್ ಕಾಂಗ್ರೆಸ್‍ನ ಹಲವು ಪದಾಧಿಕಾರಿಗಳು ಪಾಲ್ಗೊಳ್ಳುವರು.
ಇದೊಂದು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಾರ್ಯಕ್ರಮವಾಗಿರುವುದರಿಂದ ಯೂತ್ ಕಾಂಗ್ರೆಸ್‍ನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜೊತೆಗೆ ವಿವಿಧ ಸಂಘ ಸಂಸ್ಥೆಗಳವರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ನಿರುದ್ಯೋಗಿ ವಿದ್ಯಾಂತ ಯುವಕರನ್ನು ಕರೆತರುವಂತೆ ಮನವಿ ಮಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಕಾರೇಹಳ್ಳಿ ಉಲ್ಲಾಸ್, ರೆಹಮಾನ್, ಕರಿಯಪ್ಪ, ಪ್ರಧಾನ ಕಾರ್ಯದರ್ಶಿ ಖುದ್ದೂಸ್, ಅಶ್ವಿನ್‍ಕುಮಾರ್, ವಸೀಂ ಬಡಾಮಕಾನ್, ಶಶಾಂಕ್, ಕಾರ್ತಿಕ್, ಸಂತೋಷ್, ಕಾರ್ಮಿಕ ವಿಭಾಗದ ಮ್ಯಾಕ್ಲೂರಳ್ಳಿ ತಿಮ್ಮಯ್ಯ, ಯಶು, ಬಸವರಾಜ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಪ್ರಭಾರ ಅಧ್ಯಕ್ಷ ವಸೀಂಅಕ್ರಂ, ಪ್ರಧಾನ ಕಾರ್ಯದರ್ಶಿ ಆಜಾಂ ಇನ್ನು ಮುಂತಾದವರು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
