ಇಂದು `ಪೌರಕಾರ್ಮಿಕರ ದಿನ’ ಆಚರಣೆ

ತುಮಕೂರು

    ತುಮಕೂರು ಮಹಾನಗರ ಪಾಲಿಕೆಯಿಂದ ಸೆ.23 ರಂದು `ಪೌರಕಾರ್ಮಿಕರ ದಿನ’ವನ್ನು ಆಚರಿಸಲಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ನಗರದ ಮಹಾತ್ಮಗಾಂಧಿ ರಸ್ತೆಯ ಬಾಲಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ವಿವಿಧ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಐವರಿಗೆ ಸನ್ಮಾನ:   ಇದೇ ಸಂದರ್ಭದಲ್ಲಿ ನಗರದ ಎಲ್ಲ 35 ವಾರ್ಡ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟಾರೆ 507 ಪೌರಕಾರ್ಮಿಕರ ಪೈಕಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಐವರನ್ನು ಆಯ್ಕೆ ಮಾಡಿ ವೇದಿಕೆಯಲ್ಲಿ ಸನ್ಮಾನಿಸಲಾಗುತ್ತಿದೆ.
ಮೊದಲ ಬಾರಿಗೆ ಕ್ರೀಡಾಕೂಟ

      ಪೌರಕಾರ್ಮಿಕರಿಗಾಗಿ ಇದೇ ಮೊದಲ ಬಾರಿಗೆ ಶುಕ್ರವಾರ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಸಲಾಗಿದ್ದು, ಸುಮಾರು 300 ಕ್ಕೂ ಅಧಿಕ ಪೌರಕಾರ್ಮಿಕರು ಭಾಗವಹಿಸಿದ್ದುದು ವಿಶೇಷವಾಗಿತ್ತು. ಮಹಿಳೆಯರಿಗಾಗಿ ರಂಗವಲ್ಲಿ ಬಿಡಿಸುವ ಸ್ಪರ್ಧೆಯೂ ನಡೆಯಿತು. ಮಿಕ್ಕಂತೆ ಕ್ರಿಕೆಟ್, ಹಗ್ಗ ಜಗ್ಗಾಟ, ಗುಂಡೆಸೆತ ಮೊದಲಾದ ಕ್ರೀಡೆಗಳನ್ನು ನಡೆಸಲಾಯಿತು.

       ಪಾಲಿಕೆ ಆಯುಕ್ತ ಎಲ್.ಮಂಜುನಾಥಸ್ವಾಮಿ ಕ್ರೀಡಾಕೂಟದ ಸ್ಥಳಕ್ಕೆ ಆಗಮಿಸಿ ವೀಕ್ಷಿಸಿದರು. ಪಾಲಿಕೆಯ ಆರೋಗ್ಯಾಧಿಕಾರಿ ಡಾ. ನಾಗೇಶ್ ಕುಮಾರ್, ಪರಿಸರ ಇಂಜಿನಿಯರ್‍ಗಳಾದ ಮೃತ್ಯುಂಜಯ, ಕೃಷ್ಣಮೂರ್ತಿ ಮತ್ತು ಮೋಹನ್‍ಕುಮಾರ್ ಹಾಗೂ ಎಲ್ಲ ಆರೋಗ್ಯ ನಿರೀಕ್ಷಕರ ನೇತೃತ್ವದಲ್ಲಿ ಈ ಕ್ರೀಡಾಕೂಟ ನಡೆದಿದ್ದು, ಸೆ.23 ರ ಸಮಾರಂಭದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತಿದೆ.

                ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link