ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಬಂಧನ

ಬೆಂಗಳೂರು

         ಹಾಡುಹಗಲೇ ರೆಸ್ಟೋರೆಂಟ್‍ಗೆ ನುಗ್ಗಿ ರೌಡಿ ನಾಗರಾಜು ಅಲಿಯಾಸ್ ಪಿಟ್ಟನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬನ್ನೇರುಘಟ್ಟ ಪೊಲಿಸರು ಯಶಸ್ವಿಯಾಗಿದ್ದಾರೆ.

          ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಪಿಟ್ಟನನ್ನು ಮಚ್ಚು ಲಾಂಗ್‍ಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಆದರ್ಶ್, ಕಾರ್ತಿಕ್, ಸುನೀಲ್, ನಂಜಪ್ಪ ಹಾಗೂ ಪವನ್ ನನ್ನು ಬಂಧಿಸಲಾಗಿದ್ದು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

           ವಿವಿ ಪುರಂ ಪೊಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದ ನಾಗರಾಜ್ ತನ್ನ ಗೆಳೆಯರೊಂದಿಗೆ ಡಿಸೆಂಬರ್ 11ರಂದು ಬನ್ನೇರುಘಟ್ಟ ಬಳಿಯ ಮೈಲಸಂದ್ರದಲ್ಲಿರುವ ಗ್ರೀನ್ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಪಾರ್ಟಿ ಮಾಡುತ್ತಿದ್ದನು. ಈ ವೇಳೆ ಏಕಾಏಕಿ ಲಾಂಗು-ಮಚ್ಚುಗಳ ಜೊತೆ ಬಂದ ಆರೋಪಿಗಳು ನಾಗರಾಜ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.

          ಪ್ರಕರಣ ದಾಖಲಿಸಿಕೊಂಡ ಬನ್ನೇರುಘಟ್ಟ ಪೆಲಿಸರು ಕಾರ್ಯಾಚರಣೆ ನಡೆಸಿ ಖಚಿತ ಮಾಹಿತಿ ಆಧರಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link