ವಿಚಾರಣಧೀನ ಕೈದಿಗಳಲ್ಲಿ ಮುಸ್ಲಿಂ ಶಂಕಿತರೇ ಹೆಚ್ಚು

ದಾವಣಗೆರೆ :

      ದೇಶದ ಜೈಲುಗಳಲ್ಲಿರುವ ವಿಚಾರಣಧೀನ ಕೈದಿಗಳ ಪೈಕಿ ಯಾವುದೇ ಅಪರಾಧವೇ ಮಾಡದ ಮುಸ್ಲಿಂ ಶಂಕಿತರ ಸಂಖ್ಯೆ ಬಹು ದೊಡ್ಡದಿದೆ ಎಂದು ಸಾಹಿತಿ ಪೀರ್ ಬಾಷಾ ಆರೋಪಿಸಿದರು.ನಗರದ ರೋಟರಿ ಬಾಲಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ವತಿಯಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ, ಮಿಲಾದ್ ಅವಾರ್ಡ್ ಹಾಗೂ ಮಹಾನಗರ ಪಾಲಿಕೆಯ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

       ಯಾವುದೇ ಅಪರಾಧಗಳನ್ನು ಮಾಡದ ಮುಸ್ಲಿಮರನ್ನು ವಿವಿಧ ಪ್ರಕರಣಗಳಲ್ಲಿ ಶಂಕಿತರನ್ನಾಗಿ ಮಾಡಿ, ವಿಚಾರಣಧೀನ ಖೈದಿಗಳ ನೆಪದಲ್ಲಿ ಜೈಲುಗಳಲ್ಲಿ ಬಂಧಿಗಳನ್ನಾಗಿ ಇಡಲಾಗಿದೆ. ಹೀಗಾಗಿ ದೇಶದ ಜೈಲುಗಳಲ್ಲಿರುವ ವಿಚಾರಾಣಾಧೀನ ಖೈದಿಗಳ ಪೈಕಿ ಶಂಕಿತ ಮುಸ್ಲಿಮರ ಸಂಖ್ಯೆ ದೊಡ್ಡದಿದೆ ಎಂದ ಅವರು, ವ್ಯವಸ್ಥೆ ಮುಸ್ಲಿಂ ಸಮುದಾಯವನ್ನು ಜಾತಿ, ಧರ್ಮದ ಹೆಸರಿನಲ್ಲಿ ಕಳಂಕಿತರನ್ನಾಗಿ ಬಿಂಬಿಸುವ ಹುನ್ನಾರ ನಡೆಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

      ಪ್ರಜಾಪ್ರಭುತ್ವದ ನಾಲ್ಕು ಅಂಗಗಳಾಗಿರುವ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಹಾಗೂ ಪತ್ರಿಕಾರಂಗಗಳಲ್ಲಿ ಮುಸ್ಲಿಮರ ಸಂಖ್ಯೆ ಬಹಳಷ್ಟು ಕಡಿಮೆ ಇದೆ. ಮುಸ್ಲಿಮರು ಸಂಘಟಿತ ವಲಯಗಳಿಗಿಂತ ಅಸಂಘಟಿತ ವಲಯಗಳಲ್ಲಿಯೇ ದುಡಿಯುವ ಮೂಲಕ ಕಾರ್ಮಿಕರಾಗಿಯೇ ಉಳಿದಿದ್ದಾರೆ. ಹೀಗಾಗಿ ಮುಸ್ಲಿಂ ಸಮುದಾಯದ ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಯಬೇಕೆಂದು ಆಶಯ ವ್ಯಕ್ತಪಡಿಸಿದರು.

     ಮುಸ್ಲಿಂ ಜನಾಂಗದ ಜನಸಂಖ್ಯೆಯಲ್ಲಿ ಶೇ.47.5 ರಷ್ಟು ಜನ ಇನ್ನೂ ಅನಕ್ಷರಸ್ಥರಾಗಿಯೇ ಉಳಿದಿದ್ದಾರೆ. ಹೀಗಾಗಿ ಸಮುದಾಯದ ಪ್ರತಿಯೊಬ್ಬರನ್ನು ವಿದ್ಯಾವಂತರನ್ನಾಗಿ ಮಾಡುವ ಜವಾಬ್ದಾರಿ ನಮ್ಮ ಸಮುದಾಯದ ನಾಯಕರ ಮೇಲಿದೆ ಎಂದರು.ದೇಶದಲ್ಲಿ ಎಲ್ಲಾ ಸಮುದಾಯಗಳ ಜನತೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಪಥದತ್ತ ದಾಪುಗಾಲು ಇಡಲು ಸಾಧ್ಯ. ಎಂದ ಅವರು ಭಾರತದಲ್ಲಿ ಮುಸ್ಲಿಮರನ್ನು ಉನ್ನತ ಶಿಕ್ಷಣದಿಂದ ವ್ಯವಸ್ಥಿತವಾಗಿ ವಂಚಿಸಲಾಗುತ್ತಿದೆ. ಹೀಗಾಗಿ ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಸಾಕಷ್ಟು ಹಿಂದುಳಿದಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

      ಪ್ರತಿಯೊಬ್ಬರಿಗೂ ರಕ್ಷಣೆ ನೀಡಬೇಕಾದ ಪೆÇಲೀಸ್ ಇಲಾಖೆಯಲ್ಲಿ ಮುಸ್ಲಿಂ ನೌಕರರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗೆ ಪೊಲೀಸ್ ಇಲಾಖೆಯಲ್ಲೇ ಮುಸಲ್ಮಾನ್ ಸಮುದಾಯದವರನ್ನು ಪಕ್ಷಪಾತ ಮಾಡುವಂತ ಪರಿಸ್ಥಿತಿ ದೇಶದಲ್ಲಿ ನಿಮಾಣವಾಗಿರುವುದು ಅತ್ಯಂತ ವಿಪರ್ಯಾಸದ ಸಂಗತಿಯಾಗಿದೆ ಎಂದು ಹೇಳಿದರು.

     ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಅಲ್ಲದೇ, ಸಮಾಜದ ಮಹಾನಗರ ಪಾಲಿಕೆಯ ನೂತನ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಅಧ್ಯಕ್ಷ ಅಬ್ದುಲ್ ಘನಿ ತಾಹೀರ್, ಪಾಲಿಕೆ ಸದಸ್ಯರುಗಳಾದ ಕೆ.ಚಮನ್ ಸಾಬ್, ಅಬ್ದುಲ್ ಲತೀಫ್, ರಹೀಂ, ಫಯಾಜ್ ಅಹಮದ್, ಹನೀಫ್, ಖಲೀಲುಲ್ಲಾ, ಲಿಯಾಖತ್ ಅಲಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap