ದಾವಣಗೆರೆ
ರಂಭಾಪುರಿ ಶ್ರೀಗಳ ದೂರವಾಣಿ ಮಾತ್ರವಲ್ಲ ತಮ್ಮ ಫೋನ್ ಕೂಡ ಕದ್ದಾಲಿಕೆಯಾಗಿದೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದಾರೆ.ದಾವಣಗೆರೆಯಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಂಭಾಪುರಿ ಶ್ರೀಗಳ ಫೋನ್ ಕದ್ದಾಲಿಕೆಯಾಗಿದೆ ಎನ್ನುತ್ತಿದ್ದಾರೆ. ಅವರದ್ದು ಮಾತ್ರವಲ್ಲ ತಮ್ಮ ಫೋನ್ ಕೂಡ ಕದ್ದಾಲಿಕೆಯಾಗಿದೆ. ತಮ್ಮ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಕೂಡ ನಡೆದಿದೆ ಎಂದರು.
ಒಕ್ಕಲಿಗ ಸ್ವಾಮೀಜಿಗಳ ಫೋನ್ ಕದ್ದಾಲಿಕೆಯೂ ಆಗಿದೆ. ಅದೆಲ್ಲಾ ಈಗ ಯಾಕೆ ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.ಮೈತ್ರಿ ಸರ್ಕಾರದ ಅವಧಿಯಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು, ಪತ್ರಕರ್ತರು, ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ತನಿಖೆಯನ್ನು ಈಗಾಗಲೆ ರಾಜ್ಯ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿದೆ. ಸಿಬಿಐ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಈಗ ಒಂದೊಂದೇ ವಿಷಯಗಳು ಬೆಳಕಿಗೆ ಬರುತ್ತಿವೆ. ಆದಿಚುಂಚನಗಿರಿ ಮಠದ ಸ್ವಾಮೀಜಿಗಳ ದೂರವಾಣಿ ಕೂಡ ಕದ್ದಾಲಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
