ದಾವಣಗೆರೆ:
ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪನವರ ಪರವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.10ರಂದು ಬೆಳಗ್ಗೆ 10.30ಕ್ಕೆ ಪ್ರಚಾರ ಸಭೆ ಏರ್ಪಡಿಸಲಾಗಿದೆ ಎಂದು ದಾವಣಗೆರೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಸ್‍ಕೆಪಿ ರಸ್ತೆಯಲ್ಲಿರುವ ಶ್ರೀಮಾರ್ಕಂಡೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ, ಕಳೆದ 15 ವರ್ಷಗಳಿಂದ ಸಂಸದರಾಗಿರುವ ಸಿದ್ದೇಶ್ವರ್ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕ್ಷೇತ್ರಕ್ಕೆ 10 ಸಾವಿರ ಕೋಟಿ ಅನುದಾನ ತಂದಿರುವುದಾಗಿ ಹೇಳುತ್ತಿದ್ದರೂ, ಅಂತಹ ಕೆಲಸಗಳೇನೂ ಕಾಣುತ್ತಿಲ್ಲ.
ಆದ್ದರಿಂದ ಪ್ರಸಕ್ತ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಮಂಜಪ್ಪ ಗೆಲುವು ನಿಶ್ಚಿತ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಹೆಚ್.ಬಿ.ಗೋಣೆಪ್ಪ, ಪಕ್ಷದ ಮುಖಂಡರಾದ ಮಾಲತೇಶ್‍ರಾವ್ ಜಾಧವ್, ರಹಮತ್, ಜಯಣ್ಣ, ಸುಧಾ ಗೌಡ್ರು, ಉಮಾ ತೋಟಪ್ಪ, ಮಲ್ಲಿಕಾರ್ಜುನ್, ಮುಜಾಹಿದ್, ದಾದಾಪೀರ್, ಅಜ್ಜಪ್ಪ, ಎಂ.ಆರ್.ಸಿದ್ದಿಕ್, ಮಂಜುನಾಥ್, ಜಯಪ್ರಕಾಶ್ ಮತ್ತಿತರರು ಹಾಜರಿದ್ದರು