ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯ ಪರ ಬಿರುಸಿನ ಚುನಾವಣಾ ಪ್ರಚಾರ

ಹರಿಹರ:

       ತಾಲೂಕಿನ ಗಂಗನರಸಿ, ದೀಟೂರು, ಪಾಮೇನಹಳ್ಳಿ, ಸಾರಥಿ ಮತ್ತು ಚಿಕ್ಕಬಿದರಿ ಗ್ರಾಮಗಳಲ್ಲಿ ಶಾಸಕ ಎಸ್ ರಾಮಪ್ಪ ತಮ್ಮ ಬೆಂಬಲಿಗರು ಹಾಗೂ ಜೆಡಿಎಸ್‍ನ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರುಗಳೊಂದಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಲೋಕಸಭಾ ಅಭ್ಯರ್ಥಿ ಎಚ್.ಬಿ. ಮಂಜಪ್ಪನವರ ಪರವಾಗಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.

       ಸ್ಥಳೀಯ ಮುಖಂಡರು, ಜೆಡಿಎಸ್ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರೊಂದಿಗೆ ಮನೆ ಮನೆಗಳಿಗೆ ತೆರಳಿದ ಶಾಸಕರು, ಬಿಸಿಲಿನ ಬೇಗೆಯನ್ನು ಲೆಕ್ಕಿಸದೆ ಮೈತ್ರಿ ಅಭ್ಯರ್ಥಿಯ ಪರ ಪ್ರಚಾರ ನೆಡೆಸಿ ಮತ ಯಾಚಿಸಿದರು.

      ಈ ವೇಳೆ ಮತದಾರರಿಗೆ ಮನವಿ ಮಾಡಿಕೊಂಡ ಶಾಸಕರು, ಪದೇ ಪದೇ ಸುಳ್ಳು ಹೇಳಿ ಅದನ್ನೇ ಸತ್ಯವೆಂದು ನಂಬಿಸುವ ಬಿಜೆಪಿ ಪಕ್ಷವನ್ನು ಬೆಂಬಲಿಸದೆ, ಬಡವರು ಹಾಗೂ ರೈತರ ಬೆಂಬಲವನ್ನು ಶತಮಾನಗಳಿಂದ ಮಾಡುತ್ತಾ ಬಂದಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಯಾದ ಎಚ್.ಬಿ. ಮಂಜಪ್ಪ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸೋಣ ಎಂದು ಮನವರಿಕೆ ಮಾಡಿದರು.

       ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಕೀಲ ಎಂ. ನಾಗೇಂದ್ರಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬೆಳ್ಳೂಡಿ ಬಸವರಾಜ್, ಹನುಮಂತಪ್ಪ, ಸಂತೋಷ್, ಕಿರಣ್ ಹಾಗೂ ಸ್ಥಳೀಯ ಕಾಂಗ್ರೆಸ್-ಜೆಡಿಎಸ್ ಮುಖಂಡರುಗಳು ಮತ ಯಾಚಿನೆಮಾಡಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link