ಹೊಸಪೇಟೆ :
ಬಳ್ಳಾರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಅವರು ಭಾನುವಾರ ನಗರದ ಕಾಲೇಜು ಮೈದಾನ, ನಾಗಪ್ಪ ಕಟ್ಟೆ, ಎಪಿಎಂಸಿ ಮಾರುಕಟ್ಟೆ ಸೇರಿದಂತೆ ವಿವಿಧ ವಾರ್ಡುಗಳಲ್ಲಿ ಸಂಚರಿಸಿ ಮತಯಾಚಿಸಿದರು.
ಈ ವೇಳೆ ಮಾತನಾಡಿದ ಅಭ್ಯರ್ಥಿ ದೇವೇಂದ್ರಪ್ಪ, ಪ್ರಧಾನಿ ಮೋದಿ 5 ವರ್ಷ ಉತ್ತಮ ಹಾಗು ಸುಭದ್ರ ಆಡಳಿತ ನೀಡಿದ್ದಾರೆ. ಹೀಗಾಗಿ ದೇಶದಲ್ಲಿ ಅವರ ಅಲೆ ಎಲ್ಲೆಡೆ ಕಂಡು ಬರುತ್ತಿದೆ. ಮೋದಿಯವರ ಅಲೆಯೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲು ಎಲ್ಲರೂ ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಪಕ್ಷದ ಮುಖಂಡರಾದ ಅನಂತ ಪಧ್ಮನಾಭ, ಕಟಿಗಿ ರಾಮಕೃಷ್ಣ, ಗುದ್ಲಿ ಪರಶುರಾಮ, ಬಸವರಾಜ ನಾಲತವಾಡ, ಗುಂಡಿ ರಾಘವೇಂದ್ರ, ದೇವರಾಜ ಹನುವಾಳ್, ಮಧುಸೂಧನ್, ಶಂಕರ ಮೇಟಿ, ಬಂಡಿ ಸಂತೋಷ ಸೇರಿದಂತೆ ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ