ತುಮಕೂರು:
ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 112ನೇ ಜನ್ಮ ದಿನೋತ್ಸವ, ಗುರುವಂದನಾ ಸಮಾರಂಭವನ್ನು ನಾಳೆ ಸಂಜೆ 6 ಗಂಟೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ತುಮಕೂರು ನಾಗರಿಕರ ವೇದಿಕೆಯಿಂದ ಆಯೋಜಿಸಿರುವ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು ವಹಿಸುವರು. ಶ್ರೀ ಸಿದ್ಧಲಿಂಗ ಸ್ವಾಮಿಗಳ ಉಪಸ್ಥಿತಿಯಲ್ಲಿ ಮಂಗಳೂರು ರಾಮಕೃಷ್ಣಾಶ್ರಮದ ಶ್ರೀ ಜಿತಕಾಮಾನಾಂದಜಿ ಮಹಾರಾಜ್ ಆಶೀರ್ವಚನ ನೀಡುವರು. ಭಾರತ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಖ್ಯಾತ ಸಾಹಿತಿ ನಾಡೋಜ ಡಾ.ಚಂದ್ರಶೇಖರ ಕಂಬಾರ ಅಧ್ಯಕ್ಷತೆ ವಹಿಸುವರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
