ಮಧುಗಿರಿ
ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ತಾಲೂಕಿನಿಂದ ಬಿ.ನಾಗೇಶ್‍ಬಾಬುರವರನ್ನು ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ಎನ್ ರಾಜಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದ ಕಾಂಗ್ರೇಸ್ ಪಕ್ಷದ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಎಸ್ ಮಲ್ಲಿಕಾರ್ಜುನಯ್ಯ ಗುರುವಾರ ಸುದ್ದಿಗೋಷ್ಠಿನ್ನುದ್ದೇಶಿ ಮಾತನಾಡಿ ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಕಾರ್ಯ ನಿಮಿತ್ತ ವಿದೇಶ ಪ್ರವಾಸ ಕೈಗೊಂಡಿರುವುದರಿಂದ ಬಿ.ನಾಗೇಶ್‍ಬಾಬು ಅವರನ್ನು ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು, ಕಾರ್ಯಕರ್ತರು ಹಾಗೂ ಮುಖಂಡರು ಇವರ ಗೆಲುವಿಗೆ ಶ್ರಮಿಸಬೇಕೆಂದು ಪ್ರಕಟಣೆಯಲ್ಲಿ ಮಾಜಿ ಶಾಸಕರು ತಿಳಿಸಿದ್ದಾರೆ ಎಂದರು.
ಜಿ.ಪಂ ಸದಸ್ಯ ಚೌಡಪ್ಪ ಮಾತನಾಡಿ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಬಿ.ನಾಗೇಶ್‍ಬಾಬು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಕೈ ಬಲಪಡಿಸಬೇಕೆಂದು ಮುಖಂಡರಲ್ಲಿ ಮನವಿ ಮಾಡಿದರು
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಹಕಾರಿ ಮಹಾಮಂಡಲ ಅಧ್ಯಕ್ಷ ಎನ್.ಗಂಗಣ್ಣ, ಜಿ.ಪಂ ಸದಸ್ಯ ಜಿ.ಜೆ.ರಾಜಣ್ಣ, ತಾ.ಪಂ ಅಧ್ಯೆಕ್ಷೆ ಇಂದಿರಾದೇನಾಯ್ಕ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಾಜಗೋಪಾಲ್, ಎ.ಪಿ.ಎಂ.ಸಿ ಅಧ್ಯಕ್ಷ ಎಂ.ಬಿ.ಮರಿಯಣ್ಣ, ಮಾಜಿ ಅಧ್ಯಕ್ಷರಾದ ಬಿ.ವಿ.ನಾಗರಾಜಪ್ಪ, ಪಿ.ಸಿ.ಕೃಷ್ಣಾರೆಡ್ಡಿ, ಪಿ.ಟಿ.ಗೋವಿಂದಪ್ಪ, ತುಮುಲ್ ಮಾಜಿ ಅಧ್ಯಕ್ಷ ಬಿ.ನಾಗೇಶ್‍ಬಾಬು, ಮುಖಂಡರಾದ ಆದಿನಾರಾಯಣರೆಡ್ಡಿ, ಮಹಾಲಿಂಗಪ್ಪ ಎಂ.ಎಸ್.ಶಂಕರನಾರಯಣ್ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ದೀಪಕ್ ಗೌಡ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
