ಹೊಸದುರ್ಗ:
ಶ್ರೀ ಕ್ಷೇತ್ರ ಮೈಲಾರದಲ್ಲಿ ನಿರ್ಮಿಸಲಾಗಿರುವ ಕಾಗಿನೆಲೆ ಕನಕಗುರುಪೀಠದ ಶಾಖಾಮಠ ಏಳುಕೋಟಿ ಭಕ್ತರ ಕುಟೀರವು ಮೇ 7,8,9ರಂದು ಉದ್ಘಾಟನೆಗೊಳ್ಳಲಿದ್ದು, ಸಮಾಜದ ಬಾಂಧವರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತ್ತೆ ಹೊಸದುರ್ಗ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ಈ ಬಗ್ಗೆ ಶ್ರೀಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಉದ್ಘಾಟನೆ ಅಂಗವಾಗಿ ಮೂರು ದಿನಗಳ ಕಾಲ ಕಾರ್ಯಕ್ರಮ ಆಯೋಜಿಸಲಾಗಿದೆ .ಮೇ 7ರಂದು ಬೆಳಿಗ್ಗೆ 10ಕ್ಕೆ ಧ್ವಜಾರೋಹಣ ನೇರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ .ರಾತ್ರಿ 7ಗಂಟೆಗೆ ನಾಡಿನ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಸ್ಫಟಿಕ ಶಿವಲಿಂಗ ಪ್ರಾಣ ಪ್ರತಿಷ್ಠಾಪನೆ ಹಾಗೂ ಪೂಜಾ ಸಂಕಲ್ಪಜರುಗಲಿದೆ. ಶಾಸಕ ಕೆ.ಎಸ್. ಈಶ್ವರಪ್ಪಕಾರ್ಯಕ್ರಮಉದ್ಘಾಟಿಸಲಿದ್ದಾರೆ.
ಮೇ 8ರಂದು ಮಧ್ಯಾಹ್ನ 12ಕ್ಕೆ ಮೈಲಾರ ಶಾಖಾಮಠ ಏಳುಕೋಟಿ ಭಕ್ತರಕುಟೀರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಹಕಾರ ಸಚಿವ ಬಂಡೆಪ್ಪಕಾಶೆಂಪೂರ, ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ್, ಸಮಾಜದ ಗುರುಗಳಾದ ಗುರುವಿನ ಕೊಟ್ರಯ್ಯ, ಕಾಗಿನೆಲೆ ಮಹಾಸಂಸ್ಥಾನದ ಮುಖ್ಯ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಭಾಗವಹಿಸಲಿದ್ದಾರೆ.
ಮೇ 9ರಂದು ಮಧ್ಯಾಹ್ನ 12 ಗಂಟೆಗೆ ಸಿರಿಗೆರೆ ತರಳಬಾಳು ಬೃಹನ್ಮಠದಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಪ್ರತಿಷ್ಠಾಪನಾ ಮಹೋತ್ಸವ, ಸಾಮೂಹಿಕ ವಿವಾಹ ಮಹೋತ್ಸವ ನಡೆಯಲಿದೆ. ಹಿಂದುಳಿದ ದಲಿತ ಮಠಾಧೀಶರುಗಳು ಭಾಗವಹಿಸಲಿದ್ದಾರೆ . ಹುಣಸೂರು ಶಾಸಕ ವಿಶ್ವನಾಥ್‍ಕಾರ್ಯಕ್ರಮಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯಎಚ್.ಎಂ.ರೇವಣ್ಣ ಸೇರಿದಂತೆ ಮೂರು ದಿನಗಳ ಕಾರ್ಯಕ್ರಮದಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಚುನಾಯಿತಿಜನಪ್ರತಿನಿಧಿಗಳು, ವಿವಿಧಜಿಲ್ಲೆಯ ಸಮಾಜದ ಮುಖಂಡರು ಭಾಗವಹಿಸಲಿರುವರುಎಂದು ಶ್ರೀಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
