ಡಿಕೆಶಿ ಮೇಲಿನ ಐಟಿ ದಾಳಿ ವಿರುದ್ಧದ ಪ್ರತಿಭಟನೆಯಲ್ಲಿ ನಲಪಾಡ್ ಪ್ರತ್ಯಕ್ಷ್ಯ

ಬೆಂಗಳೂರು

      ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಪಾಲ್ಗೊಂಡಿದ್ದರು.

     ಆದಾಯ ತೆರಿಗೆ ಇಲಾಖೆ ಕೇಂದ್ರ ಕಚೇರಿ ಮುಂಭಾಗ ಸೇರಿದ ಕಾಂಗ್ರೆಸ್ ಕಾರ್ಯಕರ್ತರು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ್ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳ ಮೇಲೆ ಮಾಡಿರುವ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ.ಜೊತೆಗೆ, ವಿಚಾರಣೆ ನೆಪದಲ್ಲಿ ಕಿರುಕುಳ, ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು.

      ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ್ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳ ಮೇಲೆ ಮಾಡಿರುವ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಈ ದಾಳಿ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

       ರಾಜಕೀಯ ದುರುದ್ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಮೋದಿ ಸರ್ಕಾರದ ನಡೆ ಖಂಡಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಘಾತಕಾರಿ ಕೆಲಸಗಳನ್ನು ಕೇಂದ್ರ ಸರ್ಕಾರ ಮಾಡುತ್ತಿದ್ದು, ಇದರಿಂದ ಜನಸಾಮಾನ್ಯರು ಬಿಜೆಪಿ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಚುನಾವಣೆ ಮುಂದಿಟ್ಟುಕೊಂಡು ಆದಾಯ ತೆರಿಗೆ ಇಲಾಖೆ ಮೂಲಕ ರಾಜ್ಯದ ಕಾಂಗ್ರೆಸ್ ನಾಯಕನ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.

         ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನಲೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಆದಾಯ ತೆರಿಗೆ ಕಚೇರಿ ಆವರಣದ ಸುತ್ತ ಮುತ್ತ 30ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಒಂದು ಕೆಎಸ್‍ಆರ್‍ಪಿ ತುಕಡಿ ನಿಯೋಜಿಸಲಾಗಿತ್ತು.

          ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಬೆಂಗಳೂರು ನಗರ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಮೊಹಮದ್ ನಲಪಾಡ್ ಹ್ಯಾರಿಸ್‍ನನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ, ಅಂದಿನ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆದೇಶಿಸಿದ್ದರು.ಆದರೆ, ಇಂದು ನಡೆದ ಪ್ರತಿಭಟನೆಯಲ್ಲಿ ನಾಲಪಾಡ್ ಭಾಗಿಯಾಗಿದಲ್ಲದೆ, ಪೊಲೀಸ್ ಬ್ಯಾರಿಕೇಡ್ ಏರಿ, ಘೋಷಣೆ ಕೂಗಿ ಕಾರ್ಯಕರ್ತರನ್ನು ಹುರಿದುಂಬಿಸಿದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ   

Recent Articles

spot_img

Related Stories

Share via
Copy link