ಮೈಸೂರು
ಮಲೆನಾಡಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಪಿಲಾ ನದಿಯೂ ಮೈದುಂಬಿ ಹರಿಯುತ್ತಿದೆ ಇದರಿಂದಾಗಿ ದಕ್ಷಿಣ ಕಾಶಿ ಎಂದೇ ಖ್ಯಾತವಾದ ನಂಜನಗೂಡು ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ ಎಂದು ವರದಿಯಾಗಿದೆ.
ಕಪಿಲಾನದಿ ತೀರದ ಸ್ನಾನ ಘಟ್ಟ, ಹದಿನಾರು ಕಾಲು ಮಂಟಪ, ಪರಶುರಾಮ ದೇಗುಲ, ಅಯ್ಯಪ್ಪಸ್ವಾಮಿ ದೇಗುಲ ನೀರಿನಲ್ಲಿ ಮುಳುಗಡೆಯಾಗಿದ್ದು.ಚಾಮರಾಜನಗರ ನಂಜನಗೂಡು ಬೈಪಾಸ್ ರಸ್ತೆಯಲ್ಲಿ ಪ್ರವಾಹದ ನೀರು ಹರಿಯುತ್ತಿರುವುದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ನಂಜನಗೂಡು ಪಟ್ಟಣದ ಹಳ್ಳದಕೇರಿ, ತೋಪಿನ ಬೀದಿ, ಚಾಮಲಾಪುರ ಬೀದಿ, ಕುರಿಭಟ್ಟಿ ಬೀದಿ, ಒಕ್ಕಲಗೇರಿ, ನೀಲಕಂಠನಗರ, ರಾಜಾಜಿನಗರ, ಸರಸ್ವತಿ ಕಾಲೋನಿಗಳಿಗೆ ಪ್ರವಾಹದ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ ಮತ್ತು ನೂರಾರು ಮನೆಗಳು ಜಲಾವೃತವಾಗಿವೆ.ಮುಂಜಾಗ್ರತಾ ಕ್ರಮವಾಗಿ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








