ನಾಯಕ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಮನವಿ

ಪಾವಗಡ

     ವಾಲ್ಮೀಕಿ ನಾಯಕ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ತಾಲ್ಲೂಕು ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದರು.

    ಮನವಿ ಪತ್ರ ಸಲ್ಲಿಸಿ ಶ್ರೀ ವಾಲ್ಮೀಕಿ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಪಾಳ್ಳೇಗಾರ್ ಲೋಕೇಶ್ ಮಾತನಾಡಿ, ಕೇಂದ್ರ ಸರ್ಕಾರ ಈಗಾಗಲೇ ನಾಯಕ ಸಮುದಾಯಕ್ಕೆ 7.5 ಮೀಸಲಾತಿಯನ್ನು ನೀಡಿದ್ದು, ಶೇ. 3 ರಾಜ್ಯ ಸರ್ಕಾರ ನೀಡುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ನೀಡುತ್ತಿರುವಂತೆ 7.5 ಮೀಸಲಾತಿಯನ್ನು ರಾಜ್ಯ ಸರ್ಕಾರ ಘೋಷಿಸಿಬೇಕು. ಎಸ್.ಸಿ., ಎಸ್.ಟಿ. ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿಯನ್ನು ರಾಜ್ಯ ಸರ್ಕಾರ ಶೀಘ್ರ ಘೋಷಿಸಬೇಕು. ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲು ಹಾಗೂ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವ ¨ಗ್ಗೆ ವಿಶ್ವ ಕವಿ ಮಹರ್ಷಿ ವಾಲ್ಮೀಕಿ ಜಯಂತಿಯಂದು ರಾಜ್ಯ ಸರ್ಕಾರ ಘೋಷಿಸಬೇಕೆಂದು ಒತ್ತಾಯಿಸಲಾಯಿತು.

     ಜಾಗೃತಿವೇದಿಕೆಯ ಪ್ರಧಾನ ಕಾರ್ಯದರ್ಶಿ ಚಿತ್ತಗಾನಗಹಳ್ಳಿ ಚಂದ್ರಶೇಖರ್ ಮಾತನಾಡಿ, ರಾಜ್ಯದಾದ್ಯಂತ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರದಿಂದ ಉದ್ಯೋಗ ಹಾಗೂ ರಾಜಕೀಯ ಅಧಿಕಾರ ಅನುಭವಿಸುತ್ತಿರುವ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಂಡು, ನಕಲಿ ಜಾತಿಪ್ರಮಾಣ ಪತ್ರಗಳನ್ನು ಪಡೆದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

      ತಾ.ಪಂ.ಸದಸ್ಯರಾದ ನರಸಿಂಹ ಮಾತನಾಡಿ, ಈ ಹಿಂದೆ ಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ ಸಮುದಾಯದಲ್ಲಿ ನಾಲ್ಕು ಜನರಿಗೆ ಸಚಿವ ಸ್ಥಾನ ನೀಡಿದಂತೆ ಈ ಸಮ್ಮಿಶ್ರ ಸರ್ಕಾರದಲ್ಲಿ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಮೂವರು ಶಾಸಕರಿಗೆ ಸಚಿವ ಸ್ಥಾನ ಹಾಗೂ ಹತ್ತು ಶಾಸಕರಿಗೆ ನಿಗಮಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ, ತಹಸೀಲ್ದಾರ್ ವರದರಾಜುಗೆ ಮನವಿ ಪತ್ರ ಸಲ್ಲಿಸಿದರು.

      ಪ್ರತಿಭಟನೆಯಲ್ಲಿ ವೇದಿಕೆಯ ಉಪಾಧ್ಯಕ್ಷ ದಿವಾಕರ್, ಮದಕರಿ ಬ್ಯಾಂಕ್ ಮಾಜಿ ಅಧ್ಯಕ್ಷ ಎ.ಓ.ನಾಗರಾಜ್, ಕಸಬಾ ಹೋಬಳಿ ಅಧ್ಯಕ್ಷ ಕನ್ನಮೇಡಿ ಸುರೇಶ್, ನಿಡಗಲ್ ಹೋಬಳಿ ಅಧ್ಯಕ್ಷ ಓಂಕಾರ್‍ನಾಯಕ, ಕರವೇ ಅಧ್ಯಕ್ಷ ಲಕ್ಷ್ಮೀನಾರಾಯಣ, ಬೆಳ್ಳಿಬಟ್ಟಲು ಬಲರಾಂ, ಜೆ. ಆರ್. ಶ್ರೀನಿವಾಸ್, ಮಹಿಳಾ ಮುಖಂಡರಾದ ರಂಗಮ್ಮ, ಮುಖಂಡರಾದ ಪಿ.ಎನ್.ರಾಜು, ಮಂಜುನಾಥ, ಗೌಡೇಟಿ ಉಗ್ರಪ್ಪ, ನಲಿಗಾನಹಳ್ಳಿ ಲೋಕೇಶ್, ಮೂರ್ತಿ, ಡಿ.ನಾಗರಾಜು, ಮಹಾಲಿಂಗ, ಧನಂಜಯ, ಕಡಮಲಕುಂಟೆ ಸತೀಶ್, ಶ್ರೀರಾಮ ಮುಂತಾದವರು ಉಪಸ್ಥಿತರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link