ಉಡುಪಿ:
ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಅಧಿಕವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಜೆ ಜಲಾಶಯದ ಬಳಿಯ ಕಿರು ಜಲವಿದ್ಯುತ್ ಸ್ಥಾವರದ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶೀಘ್ರವೇ ಜನರ ಪ್ರಾಣ ರಕ್ಷಣೆಗೆ ತುರ್ತು ಕ್ರಮಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಪ್ರವಾಹದಲ್ಲಿ 250 ಜನ ಸಿಲುಕಿಕೊಂಡಿದ್ದು, ಅವರ ರಕ್ಷಣೆಗೆ ಎಸ್‌ಡಿಆರ್‌ಎಫ್ ತಂಡ ದೌಡಾಯಿಸಿದೆ ಎಂದರು.