ಹೊಸ ಶಿಕ್ಷಣ ನೀತಿ ನಮ್ಮಲೇ ಮೊದಲು ಜಾರಿ : ಡಿಸಿಎಂ

ರಾಮನಗರ:

      ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಅವರು ಹೇಳಿದ್ದಾರೆ.74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶನಿವಾರ ರಾಮನಗರ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೇರಿಸಿ ಭಾಷಣ ಮಾಡಿದ ಅವರು, ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

     ಇಡೀ ದೇಶದ ದಿಕ್ಸೂಚಿಯನ್ನೇ ಬದಲಿಸುವ ಶಕ್ತಿ ಇರುವ ಹಾಗೂ ಶೈಕ್ಷಣಿಕ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯಕ್ಕೆ ಹೊಸ ನೀತಿಯೂ ಮತ್ತಷ್ಟು ಬಲ ತುಂಬಲಿದೆ.ಹೀಗಾಗಿ ಈ ನೀತಿಯನ್ನು ಮೊತ್ತ ಮೊದಲು ಅಂಗೀಕರಿಸಿದ ರಾಜ್ಯ ಕರ್ನಾಟಕವೇ ಆಗಿದೆ.ಹೊಸ ನೀತಿಯ ಕರಡು ಪ್ರತಿ ಸಿಕ್ಕಿದ ಕೂಡಲೇ ಸರಕಾರ ಇದಕ್ಕೆ ಸಂಬಂಧಿಸಿ ಕಾರ್ಯಪಡೆಯನ್ನು ರಚನೆ ಮಾಡಿತ್ತು.ಕೇಂದ್ರ ನೀತಿಯನ್ನು ಪ್ರಕಟಿಸಿದ ಮೇಲೆ ಕಾರ್ಯಪಡೆ ಜತೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿ ದೆ.ನೀತಿಯ ಜಾರಿಯ ಬಗ್ಗೆ ಆದಷ್ಟು ಬೇಗ ಈ ಕಾರ್ಯಪಡೆ ವರದಿ ನೀಡಲಿದೆ ಎಂದು ಅವರು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link