ನೇಪಾಳ ಮೂಲದ ವಂಚಕನ ಬಂಧನ..!

ಬೆಂಗಳೂರು

   ಉದ್ಯೋಗದ ಆಸೆ ಹುಟ್ಟಿಸಿ ಅಕ್ರಮವಾಗಿ ನೇಪಾಳಿ ಯುವಕರನ್ನು ವಿದೇಶಗಳಿಗೆ ಸಾಗಿಸುತ್ತಿದ್ದ ಆರೋಪಿಯೊಬ್ಬನನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನೇಪಾಳ ಮೂಲದ ಬಾಬುಗಿರಿ (೪೦) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯು ವಿದೇಶಗಳಿಗೆ ಸಾಗಾಣೆ ಮಾಡುತ್ತಿದ್ದ ೯ ಮಂದಿ ನೇಪಾಳಿ ಯುವಕರನ್ನು ರಕ್ಷಿಸಲಾಗಿದೆ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರಿಗಾಗಿ ಶೋಧ ನಡೆಸಲಾಗಿದೆ

     ಆರೋಪಿಯು ಚಿಕ್ಕಜಾಲದ ಗ್ರೀನ್ ಲೀಫ್ ಇಂಟರ್ ನ್ಯಾಷನಲ್ ಕಂಫರ್ಟ್ ಲಾಡ್ಜ್‌ನಲ್ಲಿ ನೇಪಾಳದಿಂದ ಅಮಾಯಕ ಯುವಕರಿಗೆ ಮಾಲ್ಡೀವ್ಸ್ ಮುಂತಾದ ದೇಶಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ. ಯುವಕರನನು ಆರ್.ಪಿ ಶರ್ಮಾ ಎಂಬುವನ ಮೂಲಕ ಸಾಗಾಟ ಮಾಡುತ್ತಿದ್ದ ಮಾಹಿತಿಯಾಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ.

     ಕೃತ್ಯದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಶಂಭುಗಿರಿ ಹಾಗೂ ಆರ್.ಪಿ. ಶರ್ಮಾ ಬಂಧನಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ..

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link