ನೂತನ ಬಿಸಿಎಂ ಇಂಜನೀಯರಿಂಗ್ ವಿದ್ಯಾರ್ಥಿ ನಿಲಯ ಉದ್ಘಾಟನೆ

ಹಾವೇರಿ

        ಇಲ್ಲಿನ ದೇವಗಿರಿಯ ಇಂಜನೀಯರಿಂಗ್ ಕಾಲೇಜಿನ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಮಹಿಳಾ ಇಂಜನೀಯರಿಂಗ್ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಗುರುವಾರ ಆಹಾರ ಮತ್ತು ನಾಗರಿಕ ಸರಬರಾಜು, ಹಜ್ ಹಾಗೂ ವಕ್ಫ್ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ನೆರವೇರಿಸಿದರು.

         ಈ ಸಂದರ್ಭದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್.ಶಂಕರ್, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಶಾಸಕರಾದ ನೆಹರು ಓಲೇಕಾರ, ಬಿ.ಸಿ.ಪಾಟೀಲ, ವಿರಪಾಕ್ಷಪ್ಪ ಬಳ್ಳಾರಿ, ಜಿ.ಪಂ. ಉಪಾಧ್ಯಕ್ಷೆ ಶ್ರೀಮತಿ ದೀಪಾ ಅತ್ತಿಗೇರಿ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link