ಬ್ಲಾಕ್ ಕಾಂಗ್ರೆಸ್‍ನ ನೂತನ ಅಧ್ಯಕ್ಷರ ಆಯ್ಕೆ

0
26

ಬ್ಯಾಡಗಿ

        ತಾಲೂಕಿನ ಕದರಮಂಡಲಗಿ ಗ್ರಾಮದ ಹಿರಿಯ ಕಾಂಗ್ರೆಸ್ ಧುರೀಣ ಮಲ್ಲಿಕಾರ್ಜುನ ಕರಲಿಂಗಪ್ಪನವರ ಬ್ಯಾಡಗಿ ಬ್ಲಾಕ್ ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಸಿ.ಶಿಡೇನೂರ ತಿಳಿಸಿದರು.

         ಶುಕ್ರವಾರ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ ಅವರು ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಕರಲಿಂಗಪ್ಪನವರ ಅವರಿಗೆ ಆದೇಶ ಪತ್ರವನ್ನು ನೀಡಿ ಪಕ್ಷದ ಸಂಘಟನೆಗೆ ಹಾಗೂ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದರು.

         ಆದೇಶ ಪತ್ರವನ್ನು ಸ್ವೀಕರಿಸಿದ ಬ್ಯಾಡಗಿ ಬ್ಲಾಕ್ ಕಾಂಗ್ರೆಸ್‍ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಕರಲಿಂಗಪ್ಪನವರ ಮಾತನಾಡಿ ತಮಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಎಚ್.ಬುಡ್ಡನಗೌಡ್ರ, ಪುರಸಭಾ ಸದಸ್ಯರಾದ ಮಜೀದಸಾಬ ಮುಲ್ಲಾ, ಶಂಕ್ರಗೌಡ್ರ ಪಾಟೀಲ, ಖಾದರಸಾಬ ದೊಡ್ಡಮನಿ, ರಮೇಶ ಮೋಟೆಬೆನ್ನೂರ, ಮೋಹನ ಕತ್ತಿ, ರಾಜೇಸಾಬ ಕಳ್ಳಾಳ, ಉದಯ ಚೌದರಿ, ಮಹ್ಮದಹನೀಫ ಪಾಟೀಲ, ಪ್ರಕಾಶ ಲಮಾಣಿ ಹಾಗೂ ಇನ್ನಿತರರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here