ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸಿ. ಸತ್ಯಭಾಮ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು.ಸಿಇಒ ಆಗಿದ್ದ ಪಿ.ಎನ್. ರವೀಂದ್ರ ಅವರನ್ನು ವರ್ಗಾವಣೆಗೊಳಿಸಿದ್ದು, ತೆರವಾದ ಸ್ಥಾನಕ್ಕೆ, ಸಿ. ಸತ್ಯಭಾಮ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸಿ. ಸತ್ಯಭಾಮ ಅವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗುರುವಾರದಂದು ಅಧಿಕಾರ ವಹಿಸಿಕೊಂಡರು. ಅವರಿಗೆ ಹೂಗುಚ್ಛ ನೀಡುವ ಮೂಲಕ ಪಿ.ಎನ್. ರವೀಂದ್ರ ಅವರು ಜಿಲ್ಲೆಗೆ ಸ್ವಾಗತಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ