ಸಿಬ್ಬಂದಿಗೆ ತರಬೇತಿ ಹಂತದಲ್ಲಿಯೇ ನಡವಳಿಕೆ ತರಬೇತಿ : ಡಿಸಿಎಂ

ಬೆಂಗಳೂರು

        ಪೊಲೀಸ್ ಇಲಾಖೆ ಸೇರಿದ ಸಿಬ್ಬಂದಿಗೆ ತರಬೇತಿ ಹಂತದಲ್ಲಿಯೇ ಪೊಲೀಸ್ ಠಾಣೆಗಳಲ್ಲಿ ಸ್ನೇಹಪೂರ್ವಕವಾಗಿ ಸಾರ್ವಜನಿಕರ ಜೊತೆ ವರ್ತಿಸಲು ಅನುಕೂಲವಾಗುವಂತೆ ನಡವಳಿಕೆಯನ್ನು ಕಲಿಸಿಕೊಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

       ತಿಲಕ್‍ನಗರ ಪೊಲೀಸ್ ಠಾಣೆ ಹಾಗೂ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ ನವೀಕರಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಪೊಲೀಸ್ ಠಾಣೆಗಳಿಗೆ ಬರುವ ಸಾರ್ವಜನಿಕರು ಯಾವುದೇ ಭಯವಿಲ್ಲದೇ ಸೇವೆ ಪಡೆಯುವಂತಾಗಲು ತರಬೇತಿ ಸಂದರ್ಭದಲ್ಲಿ ಪೊಲೀಸರನ್ನು ಜನಸ್ನೇಹಿಗೊಳಿಸುವ ನಡವಳಿಕೆ ಹೇಳಿಕೊಡಲು ಕೆಲ ಬದಲಾವಣೆ ಮಾಡಲಾಗುವುದು ಎಂದರು.

       ಅವರು ಹಗಲು ರಾತ್ರಿ ಎನ್ನದೇ ಶ್ರಮಿಸುವ ಪೊಲೀಸರನ್ನು ಸಮಾಜದಲ್ಲಿ ಬಿಂಬಿಸುವ ರೀತಿ ಸರಿ ಇಲ್ಲ.ಅವರ ಮೇಲಿನ ಭಯ ಜನಸಾಮಾನ್ಯರಲ್ಲಿ ಹೋಗಬೇಕು. ಪೊಲೀಸರು ಕೂಡ ಹೆಚ್ಚು ಜನಸ್ನೇಹಿ ಸೇವೆ ನೀಡಬೇಕು.ಅದಕ್ಕಾಗಿ ತರಬೇತಿ ನೀಡುವ ಸಂದರ್ಭದಲ್ಲಿಯೇ ಸ್ನೇಹಪೂರ್ವಕ ನಡವಳಿಕೆ ಬಗ್ಗೆಯೂ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

      ಸುಮಾರು 1 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ತಿಲಕ್ ನಗರ ಪೊಲೀಸ್ ಠಾಣೆ ನವೀಕರಣಕಾರ್ಯವನ್ನು ಇನ್‍ಫೋಸಿಸ್ ನೇರವೇಸಿದ್ದು ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ ಸೈಬರ್ ಕ್ರೈಂ ತರಬೇತಿ ಕಟ್ಟಡವನ್ನು 22 ಕೋಟಿ ರು. ವೆಚ್ಚದಲ್ಲಿ ಇನ್‍ಫೋಸಿಸ್ ಅವರು ನಿರ್ಮಿಸಿಕೊಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

      ಕರ್ನಾಟಕ ಪೊಲೀಸ್ ಅನ್ನು ಆಧುನೀಕರಣ ಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಕೇಂದ್ರ ಸರಕಾರದ ನೆರವಿನೊಂದಿಗೆ ಸಿಸಿ ಕ್ಯಾಮರಾ ಅಳವಡಿಕೆ, ಟ್ರಾಫಿಕ್ ನಿಯಮ ಪಾಲನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

     ಪೊಲೀಸ್ ಸಿಬ್ಬಂದಿಯ ವೇತನ ತಾರತಮ್ಯ ಸರಿದೂಗಿಸಲು ಔರಾದ್ಕರ್ ಅವರ ವರದಿಯನ್ನು ಶೀಘ್ರವೇ ಜಾರಿ ಮಾಡಲು ಸರಕಾರ ಮುಂದಾಗಿದೆ ಎಂದು ಇದೇ ವೇಳೆ ತಿಳಿಸಿದರು.ಕಾರ್ಯಕ್ರಮದಲ್ಲಿ ಇನ್‍ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಶಾಸಕಿ ಸೌಮ್ಯ, ಮೇಯರ್ ಗಂಗಾಂಬಿಕೆ ಡಿಸಿಪಿ ಡಾ.ಬೋರಲಿಂಗಯ್ಯ ಪಾಲ್ಗೊಂಡಿದ್ದರು.

ಸಿಸಿಬಿ ಮೇಲೆ ವಿಶ್ವಾಸ

     ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರುಆ್ಯಂಬಿಟೆಂಡ್ ಕಂಪನಿಯ ವಂಚನೆ ಪ್ರಕರಣವನ್ನು ಸಿಸಿಬಿ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಿದ್ದು ಸಿಐಡಿಗೆ ಪ್ರಕರಣವನ್ನು ವಹಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು.

       ಆ್ಯಂಬಿಟೆಂಡ್ ಕಂಪನಿಯ ವಂಚನೆ ಪ್ರಕರಣವನ್ನು ಸಿಸಿಬಿ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಪ್ರಕರಣವು ತನಿಖಾ ಹಂತದಲ್ಲಿದ್ದು ಆರೋಪಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ತನಿಖೆ ಮುಗಿಯುವವರೆಗೂ ಏನೂ ಹೇಳಲು ಸಾಧ್ಯವಿಲ್ಲ.ಪ್ರಕರಣವನ್ನು ಸಿಐಡಿಗೆ ವಹಿಸುವ ಸಂದರ್ಭ ಬಂದಾಗ ನೋಡೋಣ ಎಂದು ಹೇಳಿದರು..

        ಸಮ್ಮಿಶ್ರ ಸರಕಾರ 49 ಸಾವಿರ ಕೋಟಿ ರು. ರೈತರ ಸಾಲಮನ್ನಾ ಮಾಡುತ್ತಿದೆ. ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕಿದರು. ಇವರ ಪಕ್ಷಕ್ಕೆ ರೈತ ಬಗ್ಗೆ ಮಾತನಾಡುವ ಅಧಿಕಾರವಿಲ್ಲ. ಸಿಎಂ ಕುಮಾರಸ್ವಾಮಿ ಅವರು ರೈತರ ಬಗ್ಗೆ ಹಗುರವಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದರು.

        ಕಬ್ಬು ಬೆಳೆಗಾರರ ಹಣ ಪಾವತಿ ವಿಚಾರವಾಗಿ ಸಿಎಂ ಅವರು ನಾಳೆ ರೈತರ ಸಭೆ ಕರೆದಿದ್ದಾರೆ. ಈ ವೇಳೆ ಹಣಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಇಂದು ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap