ನವದೆಹಲಿ
ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳನ್ನು ಗಲ್ಲಿಗೇರಿಸಲು ನ್ಯಾಯಾಲಯ ಹೊಸ ಡೆತ್ ವಾರೆಂಟ್ ಜಾರಿಮಾಡಿದೆ. ಮೂರು ಬಾರಿ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು,ಸಧ್ಯ ಎಲ್ಲಾ ಅಪರಾಧಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ಹೊಸ ಡೆತ್ ವಾರೆಂಟ್ ಜಾರಿಗೊಳಿಸಿದೆ. ಮಾರ್ಚ್ 20ರಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ವಿಧಿಸಲು ಆದೇಶಿಸಲಾಗಿದೆ.ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ (31) ಅಪರಾಧಿಗಳು. ಎಲ್ಲರೂ ದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಗಲ್ಲು ಶಿಕ್ಷೆಗೆ ತಯಾರಿ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ