ದಾವಣಗೆರೆ
ಸರ್ಕಾರದ ಆದೇಶದ ಮೇರೆಗೆ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮತಿ ಪಡೆದು ಮಲ್ಲಿಕಾರ್ಜುನ್ ವೀರಪ್ಪ ಚಳಗೇರಿ ಅವರು ದಾವಣಗೆರೆ ತಾಲೂಕು ಪಂಚಾಯತ್‍ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಉದ್ಯೋಗ ವಿಭಾಗದ ಸಹಾಯಕ ನಿರ್ದೇಶಕರಾದ ಎನ್.ಜೆ ಆನಂದ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್‍ನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನೂತನ ಕಾರ್ಯ ನಿರ್ವಾಹಕ ಅಧಿಕಾರಿಯವರಿಗೆ ಸ್ವಾಗತ ಕೋರಿದರು